-ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹದ ಭೀತಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆಯಿಂದಾಗಿ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದ್ದು, ವಿವಿಧ ರಸ್ತೆಗಳು, ಚೌಥನಿ ಗ್ರಾಮ ಸಂಪೂರ್ಣ ಜಲಾವೃತವಾಗಿವೆ.
ಪಟ್ಟಣದ ಶಂಸುದ್ದೀನ್ ವೃತ್ತದಲ್ಲಿ ನೀರು ಹರಿಯದೇ ಜಲಾವೃತಗೊಂಡಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಅಸಮರ್ಪಕವಾಗಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಅಲ್ಲದೇ ಮಳೆಯಿಂದಾಗಿ ನಗರದ ಹಲವು ಭಾಗದ ರಸ್ತೆಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ವಿಘ್ನವಾಗಿದೆ.
ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಜಿಲ್ಲೆಯ ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ ಭಾಗದಲ್ಲೂ ಹೆಚ್ಚಿನ ಮಳೆಯಾಗುತ್ತಿದೆ. ಹೀಗಾಗಿ ಕಾಳಿ, ಅಘನಾಶಿನಿ, ಗಂಗಾವಳಿ, ಶರಾವತಿ ನದಿಗಳು ಪ್ರವಾಹದ ಮಟ್ಟ ಮೀರಿ ಹರಿಯುತ್ತಿದ್ದು, ಇನ್ನೂ ಎರಡು ದಿನ ಹೆಚ್ಚಿನ ಮಳೆಯಾದಲ್ಲಿ ನದಿ ಪಾತ್ರದ ಹಲವು ಗ್ರಾಮದ ಮನೆಗಳು ಜಲಾವೃತವಾಗಲಿದೆ. ಇದನ್ನೂ ಓದಿ: ಭಾರೀ ಮಳೆ-ಕೆರೆ, ಡ್ಯಾಮ್ ಭರ್ತಿ