ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೂರಾರು ಕಿ.ಮೀ. ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ನೇಹಿತರ ಜೊತೆ ಈಜಲು ಹೋದ 22 ವರ್ಷದ ಯುವಕ ಸಾವನಪ್ಪಿದ ಘಟನೆ ಮಾಸುವ ಮುನ್ನವೇ ಇಂದು ತರೀಕೆರೆ ತಾಲೂಕಿನ ದೊಡ್ಡ ಕುಂದೂರು ಗ್ರಾಮದ ಬಳಿ ಮಹಿಳೆಯ ಮೃತದೇಹ ತೇಲಿ ಬಂದಿದೆ.
ಮೃತ ಮಹಿಳೆ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆದರೆ ಸುಮಾರು 24 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಲಕ್ಕವಳ್ಳಿ ಪೊಲೀಸರು ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಭದ್ರಾ ನಾಲೆಯಲ್ಲಿ ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ಸ್ಥಳೀಯರು ನಾಲೆ ಮಧ್ಯೆ ಇರುವ ನೀರಿನ ಪೈಪ್ ಸಹಾಯ ಪಡೆದು ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಮೃತದೇಹವನ್ನು ಎಳೆದು ತಂದಿದ್ದಾರೆ. ಇದನ್ನೂ ಓದಿ: ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆ- ಕೊಂದು ಯುವತಿಯ ಕೈ ಕಾಲು, ರುಂಡ, ಮುಂಡ ಬೇರೆ ಬೇರೆ ಮಾಡಿದ ಸೈಕೋ ಕಿಲ್ಲರ್
ಸ್ಥಳಕ್ಕೆ ಭೇಟಿ ನೀಡಿದ ಲಕ್ಕವಳ್ಳಿ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೂರಾರು ಕಿ.ಮೀ. ಮಾರ್ಗದಲ್ಲಿ ಈಗಾಗಲೇ ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಾಲ್ಕೈದು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಸಾವನ್ನಪ್ಪಿರುವ ಮಹಿಳೆ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಕೊಲೆಯೋ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ- ಅತ್ಯಾಚಾರದ ಶಂಕೆ
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೇವಲ ಜನರಷ್ಟೇ ಪ್ರಾಣ ಕಳೆದುಕೊಳ್ಳುತ್ತಿರುವುದು ಅಷ್ಟೇ ಅಲ್ಲದೆ ಜಾನುವಾರುಗಳು ಕೂಡ ಸಾವನ್ನಪ್ಪುತ್ತಿವೆ. ಕಳೆದ ನಾಲ್ಕೈದು ದಿನಗಳ ಹಿಂದೆ ಮೇಯುವಾಗ ಆಯತಪ್ಪಿ ಬಿದ್ದ ರಾಸು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದೆ. ಇದೇ ರೀತಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಮೇಲಿಂದ ಮೇಲೆ ಇಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಆದ್ದರಿಂದ ಜಿಲ್ಲೆಯ ಜನರ ಒಂದೇ ಒಂದು ಒಕ್ಕೋರಲ ಕೂಗೆಂದರೆ, ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯ ಎರಡೂ ಬದಿಯಲ್ಲಿ ತಂತಿ ಬೇಲಿ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು