ಬೆಂಗಳೂರು: ಮಳೆಯ ಅಬ್ಬರ ಮುಂದುವರಿದಿದೆ. ಹಲವು ಕಡೆ ಉತ್ತಮ ಮಳೆಯಾಗಿದ್ದು ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಮಳೆಯಿಂದಾಗಿ ಬೆಳೆ ನಾಶ, ಮನೆ ಕುಸಿತ ರಸ್ತೆ ಬಂದ್ ಆಗಿರುವ ಘಟನೆಗಳು ನಡೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
Advertisement
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾಗಮಂಡಲ ಬಹುತೇಕ ಜಲವೃತವಾಗಿದೆ. ರಸ್ತೆ ಸಂಪರ್ಕ ಕಡಿತವಾಗಿದೆ. ನದಿಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ. ಇದನ್ನೂ ಓದಿ: ಟಾಪ್‍ಲೆಸ್ ಫೋಟೋ ಶೂಟ್‍ನಲ್ಲಿ ನಟಿ ಕಿಯಾರಾ ಅಡ್ವಾಣಿ ಸಖತ್ ಹಾಟ್
Advertisement
Advertisement
ಬಾಗಲಕೋಟೆ ಹಾಗೂ ಬೆಳಗಾವಿ ಭಾಗದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿನೀರಿನ ಹರಿವು ಹೆಚ್ಚಳವಾಗಿದೆ. ಮಿರ್ಜಿ ಗ್ರಾಮದ ಬಳಿಯ ಘಟಪ್ರಭಾ ರಸ್ತೆ ಸೇತುವೆ ಜಲಾವೃತವಾಗಿದೆ. ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ ಶುರುವಾಗಿದೆ. ನದಿ ತೀರದಲ್ಲಿ ವಾಸವಾಗಿರುವ ರೈತನಿಗೆ ಪೊಲೀಸರ ಮುನ್ನೆಚ್ಚರಿಕೆಯನ್ನು ನೀಡಿದ್ದಾರೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚು ಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. 14 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು ಜಲಾವೃತವಾಗಿದೆ.
Advertisement
ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ನದಿ ತೀರದ ಗ್ರಾಮಗಳಲ್ಲಿ ಆತಂಕ ಹೆಚ್ಚಾಗಿದೆ. ಹಿರಣ್ಯಕೇಶಿ, ಮಲಪ್ರಭಾ, ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ನದಿತೀರದಲ್ಲಿ ಸಾವಿರಾರು ಹೆಕ್ಟೇರ್ ಕಬ್ಬಿನ ಗದ್ದೆಗಳು ಜಲಾವೃತವಾಗಿದೆ. ಮೂರು ದಿನಗಳಿಂದ ಮಳೆಯಾಗುತ್ತಿದ್ದರೂ ಬ್ರಿಡ್ಜ್ ಕಮ್ ಬ್ಯಾರೇಜ್ ಗೇಟ್ ಓಪನ್ ಮಾಡದೇ ನಿರ್ಲಕ್ಷ್ಯ ಮಾಡಿರುವುದರಿಂದ ಗದ್ದೆಗೆ ನದಿ ನೀರು ನುಗ್ಗಿದೆ ಎಂದು ರೈತರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ದಾಂಡೇಲಿ, ಹಳಿಯಾಳದಲ್ಲಿ ಸೇತುವೆ ಮೇಲೆ ತುಂಬಿ ಹರಿಯುತ್ತಿದೆ.
ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ಪ್ರವಾಹ ಮುನ್ಸೂಚನೆ ಹಿನ್ನೆಲೆ ರಾಯಚೂರಿನ ಕೃಷ್ಣ ನದಿ ನಡುಗಡ್ಡೆ ಗ್ರಾಮಗಳ ಜನರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ನದಿಯಲ್ಲಿ ದಾರಿಯಿಲ್ಲದ ಹಿನ್ನೆಲೆ ಅಧಿಕಾರಿಗಳು ನೀರಿನಲ್ಲಿ ನಡೆದುಕೊಂಡು ಹೋಗಿ ನಡುಗಡ್ಡೆ ಜನರಿಗೆ ಮುನ್ನೆಚ್ಚರಿಕೆ ನೀಡುತ್ತಿದ್ದಾರೆ. ತಹಶಿಲ್ದಾರ್ ಚಾಮರಾಜ ಪಾಟೀಲ್ ಸೇರಿದಂತೆ ಪೊಲೀಸ್ ಇಲಾಖೆ, ಜೆಸ್ಕಾಂ ಅಧಿಕಾರಿಗಳು ನಡುಗಡ್ಡೆಗೆ ಭೇಟಿ ನೀಡಿ ಸಮಸ್ಯೆಗಳನ್ನ ಆಲಿಸಿದ್ದಾರೆ. ಗರ್ಭಿಣಿಯರು, ಬಾಣಂತಿಯರು, ಮಕ್ಕಳು, ವೃದ್ಧರನ್ನ ಸ್ಥಳಾಂತರಿಸಲು ಸೂಚಿಸಿದ್ದಾರೆ. ನಡುಗಡ್ಡೆಗಳಿಂದ ಹೊರಬರಲು ಒಪ್ಪದ ಜನ ಶಾಶ್ವತ ಪರಿಹಾರದ ಬೇಡಿಕೆ ಇಟ್ಟಿದ್ದಾರೆ.
ಹಾಸನ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಸುರಿಯುತ್ತಿರುವ ಮಳೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಮನೆ ಕುಸಿತವಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಕಳೆದೊಂದು ವಾರದಿಂದ ಅತಿಯಾಗಿ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದಿಂದ 21 ಗೇಟ್ ಗಳ ಮೂಲಕ ನೀರನ್ನು ಹೊರ ಬಿಡುತ್ತಿದ್ದಾರೆ. ಜಲಾಶಯಕ್ಕೆ 3,1277 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ಅಂದರೆ 3,1277 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಮತ್ತೆ ಹೆಚ್ಚಿನ ಮಳೆಯಾದರೆ ಜಲಾಶಯದ ಒಳ ಹರಿವಿನ ಪ್ರಮಾಣ ಸಹ ಹೆಚ್ಚಾಗಲಿದೆ. ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಪ್ರಮಾಣವನ್ನು ಹೆಚ್ಚಳ ಮಾಡಲಾಗುತ್ತದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಲಾಶಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.