ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಸಂಬAಧ ಭಾನುವಾರ ನಿಗದಿಯಾಗಿದ್ದ ಸರ್ವಪಕ್ಷ ನಾಯಕರ ಸಭೆಯನ್ನು ಮುಂದೂಡಲಾಗಿದೆ.
ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ. ಚನ್ನಬಸವೇಶ ಅವರು ಸರ್ವಪಕ್ಷ ನಾಯಕರಿಗೆ ಪತ್ರದ ಮೂಲಕ ಮುಂದೂಡಿಕೆಯಾದ ವಿಚಾರವನ್ನು ತಿಳಿಸಿದ್ದಾರೆ.
ಭಾನುವಾರ ಸಂಜೆ 4 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಸಿಎಂ ಯಡಿಯೂರಪ್ಪನವರು ಸರ್ವ ಪಕ್ಷ ನಾಯಕರ ಸಭೆಯನ್ನು ಕರೆದಿದ್ದರು. ಕೊರೊನಾ ಪಾಸಿಟಿವ್ ದೃಢಪಟ್ಟರೂ ಸಿಎಂ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈಗ ನಿಗದಿಯಾಗಿದ್ದ ಸಭೆಯನ್ನೇ ಮುಂದೂಡಿಕೆ ಮಾಡಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರ್ಕಾರ ಸರಿಯಾಗಿ ಕೊರೊನಾ ನಿಯಮಗಳನ್ನು ಪಾಲನೆ ಮಾಡಿಲ್ಲ. ಈಗ ಸರ್ವ ಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಲು ಮುಂದಾಗಿದೆ ಎಂದು ಟೀಕಿಸಿದ್ದರು.