– 4ನೇ ಹಂತದ ಲಾಕ್‍ಡೌನ್‍ನಲ್ಲಿ ಏನೇನಿರುತ್ತದೆ?
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತೆಗಟ್ಟಲು ಕೈಗೊಂಡಿದ್ದ ಲಾಕ್ ಡೌನ್ 4ನೇ ಹಂತದ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಠೀಕರಣ ನೀಡಿದೆ.
ಮೇ 31 ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ಕಟ್ಟು ನಿಟ್ಟಾಗಿ ನಿಷೇಧ ಮಾಡಲಾಗಿದೆ. ಭಾನುವಾರ ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಪೂರ್ತಿ ದಿನ ಲಾಕ್ ಡೌನ್ ಆಗಿರಲಿದೆ. ಈ ಅವಧಿಯಲ್ಲಿ 144 ಸೆಕ್ಷನ್ ಜಾರಿಗೆ ಸ್ಥಳೀಯ ಪ್ರಾಧಿಕಾರ ಆದೇಶ ಹೊರಡಿಸಿದೆ.
Advertisement
Advertisement
ಭಾನುವಾರ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಂಪೂರ್ಣ ಲಾಕ್ ಡೌನ್ ಇದ್ದರೂ ಮದುವೆ ಸಮಾರಂಭಕ್ಕೆ ಅವಕಾಶ ನೀಡುವ ಮೂಲಕ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ. ಅನೇಕ ಸಾರ್ವಜನಿಕರು ಭಾನುವಾರದಂದು ಪೂರ್ಣ ದಿನದ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿ ಪಡಿಸಿರುವಂತಹ ಮದುವೆ ಸಮಾರಂಭಗಳನ್ನು ನಡೆಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದೆ.
Advertisement
Advertisement
ಭಾನುವಾರದಂದು ಪೂರ್ಣ ದಿನದ ಲಾಕ್ ಡೌನ್ ಎಂದು ಆದೇಶಿಸಲಾಗಿರುತ್ತದೆ. ಆದರೆ ಮದುವೆ ಸಮಾರಂಭಗಳು ಈ ಹಿಂದೆಯೇ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು, ಗರಿಷ್ಠ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಸರಳವಾಗಿ ಮದುವೆ ಸಮಾರಂಭವನ್ನು ನಡೆಸಲು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟಪಡಿಸಲಾಗಿದೆ. ಇದಲ್ಲದೇ ಭಾನುವಾರದಂದು ಅವಶ್ಯ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.
ಮದುವೆ ಸಮಾರಂಭಕ್ಕೆ ತೆರಳುವವರು ಆಯಾಯ ಜಿಲ್ಲಾಧಿಕಾರಿಗಳಿಗೆ ಗುರುತು ಪತ್ರವನ್ನು ನೀಡಿ ಅನುಮತಿ ಪಡೆದು ಪಾಸ್ ಪಡೆದುಕೊಂಡ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಬಹು.