– 24 ಗಂಟೆಯಲ್ಲಿ 148 ಮಂದಿ ಸಾವು
– 1,18,447ಕ್ಕೆ ತಲುಪಿದ ಸೋಂಕಿತರ ಸಂಖ್ಯೆ
– 48,533 ಮಂದಿ ಸೋಂಕಿನಿಂದ ಗುಣಮುಖ
ನವದೆಹಲಿ: ದಿನೇ ದಿನೇ ಕೊರೊನಾ ಆರ್ಭಟ ಭಾರತದಲ್ಲಿ ಹೆಚ್ಚಾಗುತ್ತಿದ್ದು, ಒಂದೇ ದಿನ ಬರೋಬ್ಬರಿ 6,088 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ ಭಾರತದಲ್ಲಿ 1,18,447ಕ್ಕೆ ತಲುಪಿದ್ದು, ಕಳೆದ 24 ಗಂಟೆಯಲ್ಲಿ 148 ಮಂದಿ ಸಾವನ್ನಪ್ಪಿದ್ದಾರೆ.
Spike of 6088 #COVID19 cases and 148 deaths in last 24 hours. https://t.co/r9eSU77JqF
— ANI (@ANI) May 22, 2020
ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 3,583 ಮಂದಿ ಬಲಿಯಾಗಿದ್ದಾರೆ. ಒಟ್ಟು 48,533 ಮಂದಿ ಕೊರೊನಾಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 66,330 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 1,605 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 41ರಲ್ಲಿಯೇ ಇದೆ. ಒಟ್ಟು 571 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಗುರುವಾರ ಒಂದೇ ದಿನ 143 ಸೋಂಕಿತ ಪ್ರಕರಣ ವರದಿಯಾಗಿದೆ. ಇದರಲ್ಲಿ 96 ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟಿದ್ದು, ಈ ಸೋಂಕಿತರು ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ ಇದೆ. ಗುರುವಾರ ವರದಿಯಾದ ಸೋಂಕಿತ ಪ್ರಕರಣಗಳಲ್ಲಿ 113 ಸೋಂಕಿತರು ಹೊರರಾಜ್ಯದಿಂದ ಕರ್ನಾಟಕ್ಕೆ ಬಂದವರಾಗಿದ್ದಾರೆ. ಇತ್ತ ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 201ಕ್ಕೆ ಏರಿದ್ದು, ಗುರುವಾರ ಒಂದೇ ದಿನ 33 ಪ್ರಕರಣಗಳು ಪತ್ತೆಯಾಗಿದ್ದವು. ಕೊರೊನಾ ಮುಕ್ತ ಜಿಲ್ಲೆಯಾಗಿದ್ದ ಮೈಸೂರಿನಲ್ಲೂ ಮತ್ತೆ 2 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.
ಅತೀ ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿಯೇ ಇದೆ. ಗುರುವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 2 ಸಾವಿರಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣ ವರದಿಯಾಗಿದೆ. ಈವರೆಗೆ 41,642 ಮಂದಿ ಸೋಂಕಿಗೆ ತುತ್ತಾಗಿದ್ದು, 1,454 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 11,726 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮುಂಬೈ ಒಂದರಲ್ಲೇ ಈವರೆಗೆ 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ.
ಸೋಂಕು ಹರಡಿರುವ ರಾಜ್ಯಗಳಲ್ಲಿ ಎರಡನೇ ಸ್ಥಾನವನ್ನು ಇಂದೂ ಕಾಯ್ದಿರಿಸಿಕೊಂಡ ತಮಿಳುನಾಡಿನಲ್ಲಿ ಈವರೆಗೆ 13,967 ಮಂದಿಗೆ ಕೊರೊನಾ ತಗುಲಿದ್ದು, 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇತ್ತ ಗುಜರಾತ್‍ನಲ್ಲಿ 12,910 ಮಂದಿ ಸೋಂಕಿಗೆ ತುತ್ತಾಗಿದ್ದು, 773 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 11,659 ಮಂದಿ ಕೊರೊನಾಗೆ ತುತ್ತಾಗಿದ್ದು, 194 ಮಂದಿ ಮೃತಪಟ್ಟಿದ್ದಾರೆ. ಸುಮಾರು 5,567 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
ರಾಜಸ್ಥಾನದಲ್ಲಿ 6,227 ಮಂದಿಗೆ ಸೋಂಕು ತಗುಲಿದ್ದು, 151 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ 5,981 ಮಂದಿ ಸೋಂಕಿಗೆ ತುತ್ತಾಗಿದ್ದು, 271 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 5,515ಕ್ಕೆ ಏರಿಕೆಯಾಗಿದ್ದು, 138 ಮಂದಿ ಮೃತಪಟ್ಟಿದ್ದಾರೆ.
ಆಂಧ್ರಪ್ರದೇಶದಲ್ಲಿ 2,605 ಮಂದಿಗೆ ಸೋಂಕು ತಗುಲಿದ್ದು, 54 ಮಂದಿ ಸಾವನ್ನಪ್ಪಿದ್ದಾರೆ. 1,705 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,699 ಮಂದಿ ಕೊರೊನಾಗೆ ತುತ್ತಾಗಿದ್ದು, 45 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 691 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 510 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.