– ಕಳೆದ 10 ದಿನದಲ್ಲಿ 1 ಲಕ್ಷ ಪ್ರಕರಣಗಳು ಪತ್ತೆ
ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಮೂರು ಲಕ್ಷ ದಾಟಿದ್ದು, ಸೋಂಕಿತರ ಸಾವಿನ ಸಂಖ್ಯೆ 9 ಸಾವಿರದ ಹತ್ತಿರಕ್ಕೆ ಬಂದಿದೆ.
ಭಾರತದಲ್ಲಿ ಕೊರೊನಾ ಹಿಡಿತ ತಪ್ಪಿದೆಯ ಎಂಬ ಅನುಮಾನಗಳು ಮೂಡಿವೆ. ಯಾಕೆಂದರೆ ಲಾಕ್‍ಡೌನ್ ಸಡಿಲಗೊಳಿಸಿದ ಬಳಿಕ ಭಾರತದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಸಾವಿನ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತದೆ. ಹೀಗಾಗಿ ಮತ್ತೆ ಕೇಂದ್ರ ಸರ್ಕಾರ ಲಾಕ್‍ಡೌನ್ ಜಾರಿ ಮಾಡುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.
Advertisement
Advertisement
ಭಾರತದಲ್ಲಿ ಕಳೆದ 10 ದಿನದಲ್ಲಿ 1 ಲಕ್ಷ ಪ್ರಕರಣಗಳು ದಾಖಲಾಗಿವೆ. ಇದರ ಜೊತೆಗೆ ಕಳೆದ 24 ಗಂಟೆಯಲ್ಲಿ ಸುಮಾರು 386 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 9 ಸಾವಿರದ ಗಡಿಗೆ ಬಂದು ನಿಂತಿದೆ. ಭಾರತದಲ್ಲೇ ಮಹಾರಾಷ್ಟ್ರ ಒಂದು ರಾಜ್ಯದಲ್ಲೇ 1,01,141 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಭಾರತದಲ್ಲಿ ಮಹಾರಾಷ್ಟ್ರ ಕೊರೊನಾ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿ ಇದ್ದರೆ, 40,698 ಸೋಂಕಿತರೊಂದಿಗೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.
Advertisement
Advertisement
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿರುವ ಇತ್ತೀಚಿನ ಬುಲೆಟಿನ್ ಪ್ರಕಾರ, ಪ್ರಸ್ತುತ ಭಾರತದಲ್ಲಿ ಒಟ್ಟು 3,08,993 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದರೆ, ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 8,884ಕ್ಕೆ ಏರಿದೆ. ಒಟ್ಟು ಪ್ರಕರಣಗಳಲ್ಲಿ 1,54,330 ಕೊರೊನಾ ಸೋಂಕಿತರನ್ನು ಇಲ್ಲಿಯವರೆಗೆ ಯಶಸ್ವಿಯಾಗಿ ಗುಣಪಡಿಸಲಾಗಿದ್ದು, ಪ್ರಸ್ತುತ ದೇಶದಲ್ಲಿ 1,45,779 ಪ್ರಕರಣಗಳು ಸಕ್ರಿಯವಾಗಿವೆ.
ತಮಿಳುನಾಡು ಭಾರತದಲ್ಲೇ ಎರಡನೇ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿದ್ದರೂ ಅಲ್ಲಿ ಸಾವಿನ ಸಂಖ್ಯೆ ಕಡಿಮೆ ಇದ್ದು ಇಲ್ಲಿಯವರೆಗೂ ಕೊರೊನಾದಿಂದ ಕೇವಲ 367 ಜನರು ಸಾವನಪ್ಪಿದ್ದಾರೆ. ಇದನ್ನು ಬಿಟ್ಟರೆ ಸಾವಿನ ಸಂಖ್ಯೆಯಲ್ಲೂ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿ ಇದ್ದು, ಸುಮಾರು 3,717 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಗುಜರಾತ್ ಇದ್ದು, 1,415 ಜನರು ಸಾವನ್ನಪ್ಪಿದ್ದಾರೆ.