ನವದೆಹಲಿ: ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್‍ನ ಹಿರಿಯ ನ್ಯಾಯಾಧೀಶರಾದ ಎನ್.ವಿ ರಮಣ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದಾಗಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎನ್.ವಿ.ರಮಣ ಅವರು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು. ಎನ್.ವಿ.ರಮಣ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು.
Advertisement
Advertisement
ಕಳೆದ ತಿಂಗಳು ಹಾಲಿ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರು ಮುಂದಿನ ನ್ಯಾಯಮೂರ್ತಿಯಾಗಿ ಎನ್.ವಿ ರಮಣ ಅವರನ್ನು ಶಿಫಾರಸು ಮಾಡಿದ್ದರು. ಇದರಂತೆ ಇದೀಗ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ರಮಣ ಅವರು ಅಧಿಕಾರ ಸ್ವೀಕರಿಸಿದ್ದಾರೆ. 1957 ಆಗಸ್ಟ್ 27ರಂದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ, ಪೊನ್ನವರಂನಲ್ಲಿ ಜನಿಸಿದ ರಮಣ ಅವರು, 1983 ಫೆಬ್ರವರಿ 10 ರಂದು ವಕೀಲರಾಗಿ ಸೇವೆ ಆರಂಭಿಸಿದರು. ನಂತರ 2000ರ ಜೂನ್ ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್‍ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ಬಳಿಕ 2013 ರಲ್ಲಿ ರಮಣ ಅವರು ದೆಹಲಿ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡು ಸೇವೆ ಸಲ್ಲಿಸಿದ್ದರು. ನಂತರ 2014ರ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಅವರನ್ನು ಉನ್ನತೀಕರಿಸಲಾಯಿತು. ಇದೀಗ ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಅಧಿಕಾರ ಸ್ವೀಕರಿಸಿದ್ದಾರೆ.
Advertisement
Delhi: Justice NV Ramana takes oath as the new Chief Justice of India (CJI). He was administered the oath by President Ram Nath Kovind, at Rashtrapati Bhavan. pic.twitter.com/jDESeLZh2D
— ANI (@ANI) April 24, 2021
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಅತಿ ಹೆಚ್ಚು ಸೇವಾ ಹಿರಿತನ ಹೊಂದಿರುವವರನ್ನು ಸಿಜೆಐ ಆಗಿ ನೇಮಕ ಮಾಡುವುದು ಸಂಪ್ರದಾಯ. ಹಾಲಿ ಸಿಜೆಐ ಎಸ್‍ಎ ಬೋಬ್ಡೆ ಬಳಿಕ ನ್ಯಾ.ಎನ್.ವಿ ರಮಣ ಅವರೇ ಸುಪ್ರೀಂಕೋರ್ಟ್‍ನಲ್ಲಿ ಅತಿ ಹಿರಿಯ ನ್ಯಾಯಮೂರ್ತಿ ಎನಿಸಿದ್ದಾರೆ. ಹಾಗಾಗಿ ನ್ಯಾ.ರಮಣ ಅವರನ್ನು ಮುಂದಿನ ಸಿಜೆಐ ಆಗಿ ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೋಬ್ಡೆ ಅವರು ಶಿಫಾರಸು ಮಾಡಿದ್ದರು.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬ್ಡೆ ಶುಕ್ರವಾರ ನಿವೃತ್ತಿಗೊಂಡರು ಬಳಿಕ ಇಂದು ಈ ಮಹತ್ವದ ಸ್ಥಾನವನ್ನು 63 ವರ್ಷದ ನ್ಯಾಯಮೂರ್ತಿ ಎನ್.ವಿ.ರಮಣ ತುಂಬಿದ್ದಾರೆ. ನ್ಯಾ. ರಮಣ ಅವರಿಗೆ 2022, ಆಗಸ್ಟ್ 26 ರವರೆ ಸೇವಾವಧಿ ಇರಲಿದೆ.