ಹೈದರಾಬಾದ್: ಕೋವಿಡ್ 19ಗೆ ಸದ್ಯಕ್ಕೆ ಔಷಧಿ ಇಲ್ಲ. ವಿಶ್ವದ ಹಲವೆಡೆ ಔಷಧಿಗಳನ್ನು ಕಂಡು ಹಿಡಿಯುವ ಪ್ರಯತ್ನ ಸಾಗುತ್ತಿದೆ. ಈ ನಡುವೆ ಶುಭ ಸುದ್ದಿ ಎನ್ನುವಂತೆ ಭಾರತದ ಕಂಪನಿಯೊಂದು ಲಸಿಕೆಯನ್ನು ಕಂಡು ಹಿಡಿದಿದ್ದು ರೋಗಿಗಳ ಮೇಲೆ ಪ್ರಯೋಗ ನಡೆಸಲು ಅನುಮತಿ ಪಡೆದುಕೊಂಡಿದೆ.
ಹೈದರಾಬಾದ್‌ನ ಭಾರತ್ ಬಯೋಟಿಕ್ ಕಂಪನಿ ʼಕೊವಾಕ್ಸಿನ್ʼ ಹೆಸರಿನಲ್ಲಿ ಲಸಿಕೆ ಕಂಡು ಹಿಡಿದಿದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಮತ್ತು ರಾಷ್ಟ್ರೀಯ ವೈರಾಲಜಿ ಇನ್‌ಸ್ಟಿಟ್ಯೂಟ್(ಎನ್‌ಐವಿ) ಸಹಭಾಗಿತ್ವದಲ್ಲಿ ಲಸಿಕೆಯನ್ನು ಅಭಿವೃದ್ಧಿ ಪಡಿಸಿದೆ.
Advertisement
Advertisement
ಕೇಂದ್ರ ಔಷಧಿಗಳ ಪ್ರಮಾಣಿತ ನಿಯಂತ್ರಣ ಸಂಸ್ಥೆ(ಸಿಡಿಎಸ್‌ಸಿಒ) ಡಿಜಿಸಿಐ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜುಲೈನಲ್ಲಿ ಭಾರತಾದ್ಯಂತ ಮನುಷ್ಯರ ಮೇಲೆ ಟ್ರಯಲ್ ನಡೆಯಲಿದೆ.
Advertisement
Advertisement
ಕ್ಲಿನಿಕಲ್ ಟ್ರಯಲ್‌ಗೂ ಮೊದಲು ಪ್ರಿ- ಕ್ಲಿನಿಕಲ್ ಅಧ್ಯಯನ, ಸುರಕ್ಷತೆ, ದೇಹದ ಭಾಗಗಳ ಮೇಲಾಗುವ ಪರಿಣಾಮದ ಬಗ್ಗೆ ಸಮಗ್ರ ಅಧ್ಯಯನ ವರದಿ ನೀಡಿದ ಬಳಿಕ ಕೇಂದ್ರ ಸರ್ಕಾರ ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿದೆ.
ಭಾರತ್ ಬಯೋಟಿಕ್ ಕಂಪನಿಯ ಆಡಳಿತ ನಿರ್ದೇಶಕ ಕೃಷ್ಣ ಪ್ರತಿಕ್ರಿಯಿಸಿ, ಕೊವಾಕ್ಸಿನ್ ದೇಶದ ಮೊದಲ ಕೋವಿಡ್ 19 ಔಷಧಿ ಎಂದು ಹೇಳಲು ಬಹಳ ಹೆಮ್ಮೆ ಆಗುತ್ತದೆ ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲೇ ಮೇಡ್ ಇನ್ ಇಂಡಿಯಾ ಕೋವಿಡ್ -19 ಔಷಧಿ ಲಭ್ಯವಾಗಲಿದೆ ಎಂದು ಬಯೋಕಾನ್ ಕಂಪನಿಯ ಆಡಳಿತ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಏಪ್ರಿಲ್‌ನಲ್ಲಿ ತಿಳಿಸಿದ್ದರು.
ಈಗಾಗಲೇ ಎರಡು, ಮೂರು ಸಣ್ಣ ಕಂಪನಿಗಳು ಔಷಧಿ ಅಭಿವೃದ್ಧಿ ಪಡಿಸುತ್ತಿವೆ. ಈ ಕಂಪನಿಗಳು ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಔಷಧಿ ತಯಾರಿಸುವ ಕೆಲಸ ಮಾಡುತ್ತಿವೆ. ನಾವು ಔಷಧಿ ನಿರ್ಮಾಣಕ್ಕೆ ಕೈ ಹಾಕಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.