ಭಾರತ, ಇಂಗ್ಲೆಂಡ್ ನಡುವಿನ ಮೊದಲ ಟಿ-20 ವೀಕ್ಷಿಸಿದ 28 ವಿದ್ಯಾರ್ಥಿಗಳಿಗೆ ಕೊರೊನಾ

Public TV
1 Min Read
IND VS IIMA

ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ-20 ಪಂದ್ಯವನ್ನು ನರೇಂದ್ರ ಮೋದಿ ಸ್ಟೇಡಿಯಂಗೆ ತೆರಳಿ ವೀಕ್ಷಿಸಿದ್ದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಅಹಮದಾಬಾದ್ ಕ್ಯಾಂಪಸ್‍ನ 28 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ.

IIMAಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ-20 ಸರಣಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಮೊದಲ ಎರಡು ಟಿ-20 ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದ್ದ ಗುಜಾರಾತ್ ಕ್ರಿಕೆಟ್ ಅಸೋಸಿಯೇಷನ್ ನಂತರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದ ಕಾರಣ ಉಳಿದ ಮೂರು ಪಂದ್ಯಗಳಿಗೆ ಪ್ರೇಕ್ಷಕರಿಗೆ ನಿರ್ಬಂಧ ವಿಧಿಸಿತ್ತು. ಮೊದಲ ಪಂದ್ಯವನ್ನು ಸ್ಟೇಡಿಯಂಗೆ ತೆರಳಿ ವೀಕ್ಷಿಸಿದ್ದ, ಐಐಎಂಎ ಕ್ಯಾಂಪಸ್‍ನ 5 ವಿದ್ಯಾರ್ಥಿಗಳಲ್ಲಿ ಮೊದಲು ಕೊರೊನಾ ದೃಢಪಟ್ಟ ಹಿನ್ನೆಲೆ ಉಳಿದ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಒಟ್ಟು 28 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದೆ.

IND VS IIMA 1 1

ಈಗಾಗಲೇ ಕಾಲೇಜು ಕ್ಯಾಂಪಸ್‍ನ ಬಹುತೇಕ ಎಲ್ಲರನ್ನು ಪರೀಕ್ಷೆಗೊಳಪಡಿಸಲಾಗಿದ್ದು ಉಳಿದವರ ವರದಿ ಇನ್ನಷ್ಟೇ ಬರಬೇಕಾಗಿದೆ ಎಂದು ಕಾಲೇಜಿನ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *