ಮುಂಬೈ: ಧಾರಾಕಾರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮಹಾರಾಷ್ಟ್ರದ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದೆ. ಗೋಡೆ ಪಕ್ಕದಲ್ಲಿದ್ದ ಗುಡಿಸಲುಗಳ ಮೇಲೆ ಬಿದಿದ್ದು, ಈ ವೇಳೆ ಅಲ್ಲಿದ್ದ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
Maharashtra | 11 people killed after a wall collapse on some shanties in Chembur’s Bharat Nagar area due to a landslide, says National Disaster Response Force (NDRF)
Rescue operation is underway. pic.twitter.com/W24NJFWThU
— ANI (@ANI) July 18, 2021
ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್)ದ 2 ತಂಡ ದೌಡಾಯಿಸಿದ್ದು,ಅಗ್ನಿ ಶಾಮಕ ದಳದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಭಾರೀ ಮಳೆಯಿಂದಾಗಿ ಮುಂಬೈ ನದಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಹಲವೆಡೆ ಭೂಕುಸಿತ ಸಮಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ವಾಹನಗಳು ತೇಲಿ ಹೋಗಿವೆ, ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗಿದ್ದು, ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.