ಮಡಿಕೇರಿ: ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ 4 ದಿನಗಳು ಜಿಲ್ಲಾಡಳಿತ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ.
ಸೆಪ್ಟೆಂಬರ್ 19 ರಿಂದ 22 ರವರೆಗೆ ಜಿಲ್ಲೆ ಮತ್ತು ಮಲೆನಾಡು ಭಾಗದಲ್ಲಿ ಸಾಧಾರಣ ಹಾಗೂ ಗುಡುಗು ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19 ರಿಂದ 21ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಹಾಗೂ ಸೆ.21 ರಿಂದ ಸೆ.22ರ ಬೆಳಗ್ಗೆವರೆಗೆ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
Advertisement
Advertisement
ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸುಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ. ಇತ್ತ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಕಲಬುರಗಿ, ರಾಯಚೂರು, ಬೀದರ್, ಯಾದಗಿರಿಯಲ್ಲಿ ಭಾರೀ ಮಳೆಯಾಗಿದೆ.