ಬೆಂಗಳೂರು: ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಹಿನ್ನೆಲೆ ಹವಾಮಾನ ಇಲಾಖೆ 5 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.
Advertisement
ರಾಜ್ಯದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಮೂರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ಇನ್ನು ಬೆಳಗಾವಿ, ಧಾರವಾಡದಲ್ಲಿ ಜು.9 ಹಾಗೂ 10 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.
Advertisement
Advertisement
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ಜು.10ರ ವರೆಗೆ ಸಾಧಾರಣ ಮಳೆ ಹಾಗೂ ಕೆಲವೆಡೆ ವ್ಯಾಪಕ ಮಳೆಯಾಗಲಿದೆ. ಜು.8, 9 ಹಾಗೂ 10ರಂದು ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಕೊರೊನಾ ನಡುವೆ ಇದೀಗ ಮಳೆಯ ಅಬ್ಬರ ಜನತೆಯ ನಿದ್ದೆಗೆಡಿಸಿದೆ.