ಪತ್ತನಂತಿಟ್ಟ: ಶಬರಿಮಲೆ ದರ್ಶನಕ್ಕೆ ಅಯ್ಯಪ್ಪ ಭಕ್ತರು ಪಂಪಾ ನದಿಗಿಳಿಯದಂತೆ ಪತ್ತನಂತಿಟ್ಟ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು (Pampa River), ಈ ಹಿನ್ನೆಲೆಯಲ್ಲಿ ಪಂಪಾ ನದಿಯಲ್ಲಿ (Kerala Rain) ನೀರಿನ ಹರಿವು ಹೆಚ್ಚಾಗಿದೆ. ತುಲಾ ಮಾಸ ಪೂಜೆಗಾಗಿ ಇಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗಿದೆ. ಭಾನುವಾರ ಬೆಳಗ್ಗೆ 5ರಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
Advertisement
ಪಂಪಾ ನದಿಯಲ್ಲಿ ಸದ್ಯ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಯಾತ್ರಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಅಲ್ಲದೆ ಈ ದಾರಿಯಲ್ಲಿ ಸಾಧ್ಯವಾದಷ್ಟು ರಾತ್ರಿ ಸಂಚಾರ ಮಾಡಬೇಡಿ ಎಂದು ಜಲಸಂಪನ್ಮೂಲ ಸಚಿವ ರೋಷಿ ಅಗಸ್ಟಿನ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಪ್ರವಾಹ- ಮೂವರು ಬಲಿ, 10 ಮಂದಿ ನಾಪತ್ತೆ
Advertisement
Advertisement
ಮಳೆಯಿಂದ ಉಂಟಾಗಬಹುದಾದ ಹಾನಿ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿರುವ ಜನರನ್ನು ಸ್ಥಳಾಂತರಿಸುವ ಕೆಲಸ ಪ್ರಗತಿಯಲ್ಲಿದೆ ಎಂದೂ ಅವರು ಇದೇ ವೇಳೆ ಹೇಳಿದರು. ಇದನ್ನೂ ಓದಿ: ಜಯಲಲಿತಾ ಸಮಾಧಿಗೆ ತೆರಳಿದ ಚಿನ್ನಮ್ಮ- ಮತ್ತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ?
Advertisement
ಸದ್ಯ ಪತ್ತನಂತಿಟ್ಟ ಜಿಲ್ಲೆಯ ಆನತ್ತೋಡ್ ಡ್ಯಾಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಆಲೆಪ್ಪಿ, ಕೊಟ್ಟಾಯಂ, ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ ಹಾಗೂ ತ್ರಿಶ್ಶೂರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಘಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದನ್ನೂ ಓದಿ: ಲಸಿಕೆ ನೀಡಲು ಬಂದ ಸಿಬ್ಬಂದಿಗೆ ಹಾವು ತೋರಿಸಿ ಬೆದರಿಕೆ ಹಾಕಿದ ಮಹಿಳೆ