ಚಿಕ್ಕೋಡಿ: ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮಗಳು ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸೌಂದಲಗಾ ಗ್ರಾಮದ ಬಳಿ ನಡೆದಿದೆ.
ಸ್ವಿಫ್ಟ್ ಡಿಸೈರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5 ಜನರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಮೃತಪಟ್ಟವರನ್ನು ಲತಾ ರಾಜೇಂದ್ರ ಪಾಟೀಲ್ (38) ಮತ್ತು ಅನಿಷಾ ರಾಜೇಂದ್ರ ಪಾಟೀಲ್ (16) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸುಮೀತ ಪಾಟೀಲ್, ರಾಜೇಂದ್ರ ಪಾಟೀಲ್, ಅಥರ್ವ ಪಾಟೀಲ್ ಎಂದು ಗುರುತಿಸಲಾಗಿದ್ದು. ಗಾಯಳುಗಳಿಗೆ ನಿಪ್ಪಾಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಹಾರಾಷ್ಟ್ರದ ಮಿರಜ್ ನಗರದ ಪಾಟೀಲ್ ಕುಟುಂಬ ಸಾಂಗಲಿಯಿಂದ ಬೆಂಗಳೂರು ನಗರಕ್ಕೆ ಪ್ರಯಾಣ ಬೆಳೆದುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.