Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆ ನೆನಪಿನಲ್ಲಿ ಉಳಿಯುತ್ತೆ: ಐಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆ ನೆನಪಿನಲ್ಲಿ ಉಳಿಯುತ್ತೆ: ಐಜಿ

Crime

ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆ ನೆನಪಿನಲ್ಲಿ ಉಳಿಯುತ್ತೆ: ಐಜಿ

Public TV
Last updated: November 3, 2020 1:29 pm
Public TV
Share
2 Min Read
BIJ SHOOTOUT
SHARE

ವಿಜಯಪುರ: ಕಳೆದ ಮೂರು ವರ್ಷಗಳಿಂದ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ರಕ್ತಪಾತದ ಕಹಳೆ ಮೊಳಗಿದೆ. ನಿನ್ನೆ ಮಹಾದೇವ ಸಾಹುಕಾರ್ ಭೈರಗೊಂಡ ಹಾಗೂ ಸಹಚರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಐಜಿ ರಾಘವೇಂದ್ರ, ಈ ತನಿಖೆ ನೆನಪಿನಲ್ಲಿ ಉಳಿಯಲಿದೆ ಎಂದು ಹೇಳಿದ್ದಾರೆ.

BIJ SHOOTOUT c

ಶೂಟೌಟ್ ನಡೆದಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಐಜಿ, ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದಾಳಿ ನಡೆಸಿದವರ ಗುರುತು ಪತ್ತೆಯಾಗಿದ್ದು, ಅತೀ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ. ಘಟನೆ ಸಂದರ್ಭದಲ್ಲಿ 15 ರಿಂದ 20 ಜನ ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇದ್ದು, ದಾಳಿ ಮಾಡಿದವರ ಕಡೆಯಲ್ಲೂ ಇಬ್ಬರಿಗೆ ಗಾಯಗಳಾಗಿವೆ ಎಂಬುದಾಗಿ ತಿಳಿದುಬಂದಿದೆ.

BIJ SHOOTOUT b

ಪ್ರಾಥಮಿಕ ತನಿಖೆಯ ಮಾಹಿತಿ ಅನ್ವಯ ಆರೋಪಿಗಳು, 23 ರಿಂದ 30 ವರ್ಷದೊಳಗಿನ ವ್ಯಕ್ತಿಗಳಾಗಿದ್ದಾರೆ. ಘಟನಾ ಸ್ಥಳದಲ್ಲಿ 6 ರಿಂದ 7 ವೆಪನ್ ಗಳ ಗುಂಡುಗಳು ಪತ್ತೆಯಾಗಿದೆ. ಸದ್ಯ ಆರೋಪಿಗಳು ಗಾಯಗೊಂಡಿರುವ ಕಾರಣ ವಿಜಯಪುರ, ಮಹಾರಾಷ್ಟ್ರದ ಸೋಲಾಪುರ, ಪುಣೆಗಳಲ್ಲಿ ಆಸ್ಪತ್ರೆಗಳಿಗೆ ಗಾಯಾಳುಗಳ ಮಾಹಿತಿ ಕೇಳಿದ್ದೇವೆ. ನಿನ್ನೆ ಸಂಜೆಯಿಂದ 35 ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. 37 ಜನ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ವಿಜಯಪುರ ಸೇರಿ ನಾನಾ ಗಸ್ತು ನಡೆಸಿದ್ದಾರೆ. ಈ ದಾಳಿಯಲ್ಲಿ ಪಾಲ್ಗೊಂಡ ಎಲ್ಲರನ್ನು ಶೀಘ್ರವೇ ಬಂಧಿಸುತ್ತೇವೆ. ಘಟನಾ ಸ್ಥಳದಲ್ಲಿ ಮಚ್ಚು, ಲಾಂಗ್, ಪೆಟ್ರೋಲ್ ಬಾಂಬ್ ಸೇರಿದಂತೆ 5 ಮೋಟಾರ್ ಸೈಕಲ್, ಟ್ರಕ್‍ ಅನ್ನು ವಶಕ್ಕೆ ಪಡೆದಿದ್ದೇವೆ ಎಂದರು.

BIJ SHOOTOUT a

ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳಲ್ಲಿ ಕೆಲ ಸ್ಥಳೀಯರ ಮಾಹಿತಿ ಲಭಿಸಿದೆ. ಅಲ್ಲದೇ ಪುಣೆ, ಉತ್ತರ ಪ್ರದೇಶದ ಜನರೂ ಭಾಗಿಯಾಗಿರುವ ಸಾಧ್ಯತೆಯಿದೆ. ಘಟನೆ ನಡೆದಿರುವುದನ್ನು ಗಮನಿಸಿದರೆ ಪಕ್ಕಾ ಪ್ಲಾನ್ ಮಾಡಿ ದಾಳಿ ಮಾಡಿದ್ದಾರೆ. ಈ ಪ್ರರಕಣದ ತನಿಖೆ ಜನರ ನೆನಪಿನಲ್ಲಿ ಉಳಿಯುತ್ತದೆ. ವಿಜಯಪುರ, ಕಲಬುರಗಿಯಲ್ಲಿ ಸಕ್ರಿಯವಾಗಿರುವ ಗ್ಯಾಂಗ್‍ಗಳನ್ನು ಮಟ್ಟ ಹಾಕುತ್ತೇವೆ ಎಂದರು.

BIJ SHOOTOUT d

ಏನಿದು ಘಟನೆ: ಭೀಮಾ ತೀರದಲ್ಲಿ ಬಹುದಿನಗಳ ಬಳಿಕ ಸೋಮವಾರ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಅಪರಿಚಿತ ಗುಂಪೊಂದು ದಾಳಿ ಮಾಡಿತ್ತು. ವಿಜಯಪುರ ಹೊರವಲಯದ ಭೂತನಾಳ ತಾಂಡಾ ಬಳಿ ಮಹಾದೇವ ಸಾಹುಕಾರ ಭೈರಗೊಂಡ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ ಬಳಿಕ ಗುಂಡಿನ ದಾಳಿ ನಡೆಸಲಾಗಿತ್ತು. ಘಟನೆಯಲ್ಲಿ ಮಹಾದೇವ ಸಾಹುಕಾರ ಭೈರಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭೈರಗೊಂಡ ಜೊತೆಗಿದ್ದ ಗನ್‍ಮ್ಯಾನ್ ಸೇರಿದಂತೆ ಕಾರಿನ ಚಾಲಕ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಸದ್ಯ ಮಹಾದೇವ ಭೈರಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ನಿನ್ನೆ ರಾತ್ರಿಯೇ ಆಪರೇಷನ್ ನಡೆಸಿ ಭೈರಗೌಡ ಹೊಟ್ಟೆ, ಪಕ್ಕೆಲುಬು ಭಾಗಕ್ಕೆ ಹೊಕ್ಕಿದ್ದ ಗುಂಡುಗಳನ್ನು ಹೊರ ತೆಗೆದಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‍ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಭೈರಗೊಂಡ ಕುಟುಂಬಸ್ಥರು ನೀಡಿದ್ದಾರೆ.

BIJ SHOOTOUT e

TAGGED:Mahadeva Sahukar ByragondapolicePublic TVshootoutvijayapuraಪಬ್ಲಿಕ್ ಟಿವಿಪೊಲೀಸ್ಮಹಾದೇವ ಸಾಹುಕಾರ ಭೈರಗೊಂಡವಿಜಯಪುರಶೂಟೌಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
24 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
56 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?