ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬದವರು, ಆಪ್ತರಿಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಹ್ಯಾಂಡ್ ಸಮನ್ಸ್ ಜಾರಿಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 17 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಫೋನ್‍ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆ – ವರ್ಷ ಆಗುವುದರೊಳಗೆ ಯುವತಿ ಆತ್ಮಹತ್ಯೆ!
Advertisement
Advertisement
ಆರೋಪ ಏನು?
ಕೋಲ್ಕತ್ತಾ ಮೂಲದ ಶೆಲ್ ಕಂಪನಿಯಲ್ಲಿ ಹೂಡಿಕೆಗೆ ಪ್ರತಿಯಾಗಿ 12.5 ಕೋಟಿ ಹಣ, ಮತ್ತೊಮ್ಮೆ 5.5 ಕೋಟಿ ಪಡೆದು ಭ್ರಷ್ಟಾಚಾರ ಎಸಗಿದ್ದಾರೆ. ಬಿಎಸ್‍ವೈ, ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಡಿ , ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಮ್, ಸಚಿವ ಎಸ್ ಟಿ ಸೋಮಶೇಖರ್, ಅಂದಿನ ಬಿಡಿಎ ಆಯುಕ್ತ ಡಾ ಜಿಸಿ ಪ್ರಕಾಶ್, ಕೆ ರವಿ, ಮತ್ತು ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಅಬ್ರಹಾಂ ದೂರು ನೀಡಿದ್ದರು.