ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಜೋಶಿ ಹೇಳಿದ್ದಾರೆ.
ರಾಜ್ಯ ಬಿ.ಜೆ.ಪಿ ಪ್ರಶಿಕ್ಷಣ ಪ್ರಕೋಷ್ಠದ ವತಿಯಿಂದ ಆಯೋಜಿತವಾದ ಪ್ರಧಾನಿ @narendramodi ಅವರ ನಾಯಕತ್ವದ ಎನ್.ಡಿ.ಎ ಸರಕಾರದ 7 ವರ್ಷಗಳ ಗಮನಾರ್ಹ ಸಾಧನೆ ಕುರಿತು ಇಂದು ಪ್ರಕೋಷ್ಠದಲ್ಲಿ ವೀಡಿಯೊ ಕಾನ್ಫರೆನ್ಸ ಮುಖಾಂತರ ಮುಖ್ಯ ವಕ್ತಾರನಾಗಿ ಮಾತನಾಡಿದ ಸಂದರ್ಭ. pic.twitter.com/laTXdnReI8
— Pralhad Joshi (@JoshiPralhad) June 23, 2021
Advertisement
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಮಟ್ಟದ ಇ ಪ್ರಶಿಕ್ಷಣ ಚಿಂತನ ವರ್ಗದಲ್ಲಿ ವೆಬೆಕ್ಸ್ ಮೂಲಕ ಮಾತನಾಡಿದ ಅವರು, ಒಂದು ದೇಶದಲ್ಲಿ ಎರಡು ಕಾಯ್ದೆ ಇರಬಾರದು ಎಂಬ ಚಿಂತನೆ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರದಾಗಿತ್ತು. ಅದನ್ನು ವಿಶ್ವದಾದ್ಯಂತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಈಡೇರಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಲ್ಲದ ಅಪ್ಪನಿಗೆ ನಿತ್ಯವೂ ಕರೆ ಮಾಡ್ತಾಳೆ ಮಗಳು
Advertisement
ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ ದಿನವಾದ ಇಂದು ಕೊಪ್ಪಳದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ, ನಮನಗಳನ್ನು ಸಲ್ಲಿಸಲಾಯಿತು.#ShyamaPrasadMukharjee pic.twitter.com/3N06dX48iD
— Nalinkumar Kateel (@nalinkateel) June 23, 2021
Advertisement
ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತಂದರು. ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಇಲ್ಲದ ಯೋಜನೆ ಇದಾಗಿದೆ. ಭ್ರಷ್ಟಾಚಾರದಲ್ಲೇ ಮುಳುಗಿದ್ದ ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ಇದರಿಂದ ವಿಲವಿಲ ಒದ್ದಾಡುವಂತಾಗಿದೆ ಎಂದಿದ್ದಾರೆ. ಇದನ್ನೂ ಓದಿ: 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆಗೆ ಚಾಲನೆ
Advertisement
ವಿಶ್ವದ ಅತೀ ದೊಡ್ಡ ಲಸಿಕೆ ಅಭಿಯಾನದಲ್ಲಿ ಕರ್ನಾಟಕ ರಾಜ್ಯ ಹೊಸ ದಾಖಲೆ ಬರೆದಿದ್ದು, ಇದುವರೆಗೆ 2 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಿದೆ.#VaccineForAll #LargestVaccinationDrive #KarnatakaFightsCorona pic.twitter.com/0C8mjw4jBo
— BJP Karnataka (@BJP4Karnataka) June 22, 2021
ದೇಶದ ಸಾರ್ವಭೌಮತೆ ಮತ್ತು ಏಕತೆಗೆ ವಿಶಿಷ್ಟ ಕೊಡುಗೆ ನೀಡಿದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಕನಸನ್ನು ನನಸಾಗಿಸುವತ್ತ ನಮ್ಮ ನೆಚ್ಚಿನ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರದ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ನಮ್ಮ ಕಾರ್ಯಕರ್ತರು ಮತ್ತು ಜನರಿಗೆ ಮಾಹಿತಿ ಕೊಡಬೇಕಾಗಿದೆ ಎಂದು ಅವರು ಕರೆ ನೀಡಿದರು.
कैबिनेट द्वारा ‘प्रधानमंत्री गरीब कल्याण अन्न योजना’ को नवंबर तक विस्तार करना गरीब कल्याण के प्रति @NarendraModi सरकार की प्रतिबद्धता दर्शाता है।
कोरोना संकट में यह योजना देश के 80 करोड़ से अधिक लोगों के लिए उनकी मुश्किलें कम करने में एक बड़ा सहारा साबित हुई है। #JanJanKoAnn pic.twitter.com/L2MMB77QAO
— Pralhad Joshi (@JoshiPralhad) June 23, 2021
ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರಕಾರವು ರೈತರಿಗೆ ನೆರವಾಗುತ್ತಿದೆ. ರೈತರು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಹಿಂದೆ ರಾಜ್ಯದ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಮಾತ್ರ ವಿಮಾನನಿಲ್ದಾಣಗಳಿದ್ದವು. ಈಗ ಉಡಾಣ್ ಯೋಜನೆಯಡಿ ಹುಬ್ಬಳ್ಳಿ, ಬೆಳಗಾವಿ, ತೋರಣಗಲ್, ಬೀದರ್ ಮತ್ತು ಕಲಬುರ್ಗಿಯಲ್ಲಿ ವಿಮಾನನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇದು ಕೇಂದ್ರ ಸರಕಾರದ ಮಹತ್ವದ ಕೊಡುಗೆ ಎಂದು ವಿವರಿಸಿದರು.
ಕೇಂದ್ರ ಸಚಿವ ಸಂಪುಟ ಸಭೆಯಲಿ ಪಿಎಂ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ನೀಡುತ್ತಿದ್ದ ಉಚಿತ ಆಹಾರ ಧಾನ್ಯವನ್ನು ನವೆಂಬರ ತಿಂಗಳವರೆಗೆ ವಿಸ್ತಾರ ಮಾಡಿದ್ದು, ಇದು ಪ್ರಧಾನಿ @narendramodi ಅವರಿಗೆ ಬಡವರ ಕಲ್ಯಾಣದ ಬಗ್ಗೆ ಇರುವ ವಿಶೇಷ ಕಾಳಜಿಯನ್ನು ತೋರಿಸುತ್ತದೆ. #JanJanKoAnn
— Pralhad Joshi (@JoshiPralhad) June 23, 2021
ಜಲ ಮಿಷನ್ ಯೋಜನೆಯು ಪ್ರಧಾನಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಇದರಡಿ ಲಕ್ಷಾಂತರ ಹಳ್ಳಿಗಳಿಗೆ ಪ್ರಯೋಜನ ಲಭಿಸಲಿದೆ. ಉಜಾಲಾ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮೂಲಸೌಕರ್ಯ ಹೆಚ್ಚಳಕ್ಕೆ ಭಾರತವು ಕಳೆದ ಏಳು ವರ್ಷಗಳಲ್ಲಿ ಗರಿಷ್ಠ ಆದ್ಯತೆ ನೀಡಿದೆ. ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಮೈಸೂರು- ಬೆಂಗಳೂರು, ಬೆಂಗಳೂರು- ಚೆನ್ನೈ ಕಾರಿಡಾರ್ ರಸ್ತೆ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದರು. ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ದಿನದಂದು ದೇಶದಲ್ಲಿ ಸುಮಾರು 86 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದೊಂದು ದೊಡ್ಡ ಸಾಧನೆ. ಆಕ್ಸಿಜನ್ ಪೂರೈಕೆಯನ್ನು 900 ಮೆಟ್ರಿಕ್ ಟನ್‍ನಿಂದ 9 ಸಾವಿರ ಮೆಟ್ರಿಕ್ ಟನ್‍ಗೆ ಹೆಚ್ಚಿಸಿರುವುದು, ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಸುಸಜ್ಜಿತಗೊಳಿಸಿದ್ದು ಕೂಡ ಕೋವಿಡ್ ಸಂದರ್ಭದ ಸಮರ್ಪಕ ನಿರ್ವಹಣೆಗೆ ಉದಾಹರಣೆ ಎಂದು ತಿಳಿಸಿದರು.
ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಮೇ ಮತ್ತು ಜೂನ ತಿಂಗಳಲ್ಲಿ ಈ ಯೋಜನೆ ಅಡಿ 466396 ಕುಟಂಬದ ಒಟ್ಟು 1601401 ಫಲಾನುಭವಿಗಳಿಗೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿಯಂತೆ ಒಟ್ಟು 157243 ಕ್ವಿಂಟಲ್ ಅಕ್ಕಿಯನ್ನು ವಿತರಣೆ ಮಾಡಲಾಗಿದೆ.#JanJanKoAnn
— Pralhad Joshi (@JoshiPralhad) June 23, 2021
ಕಾಂಗ್ರೆಸ್ ಪಕ್ಷವು ಗರೀಬಿ ಹಠಾವೋ ಘೋಷಣೆಯು ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿತ್ತು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದ ಕಾಲದಲ್ಲಿ ಭ್ರಷ್ಟಾಚಾರ ಪ್ರಮಾಣ ಮಿತಿ ಮೀರಿತ್ತು. ಆದರೆ, ಶ್ರೀ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭ್ರಷ್ಟಾಚಾರರಹಿತವಾಗಿ ಯೋಜನೆಯ ಪ್ರಯೋಜನವು ಫಲಾನುಭವಿಗಳಿಗೆ ಲಭಿಸುತ್ತಿದೆ ಎಂದು ತಿಳಿಸಿದರು.
ಕೋವಿಡ್ ಎರಡನೇ ಅಲೆಯಿಂದಾಗಿ ಜನರು ತತ್ತರಿಸುವ ಈ ಸಂದರ್ಭದಲ್ಲಿ ದೇಶದ 80 ಕೋಟಿ ಫಲಾನುಭವಿಗಳಿಗೆ ಈ ಯೋಜನೆ ತಲುಪಲಿದೆ. ಈ ಯೋಜನೆಯಡಿ ಐದು ಕೆಜಿ ಆಹಾರ ಧಾನ್ಯವನ್ನು ದೇಶದ ಬಡ ಜನರಿಗೆ ನೀಡಲಾಗುವುದು. #JanJanKoAnn
— Pralhad Joshi (@JoshiPralhad) June 23, 2021
ಶ್ರೀ ಜಗನ್ನಾಥ ರಾವ್ ಜೋಶಿ ಅವರ ಒಡನಾಟವು ನನ್ನ ಬೆಳವಣಿಗೆಗೆ ಅನನ್ಯ ಕೊಡುಗೆ ನೀಡಿದೆ ಎಂದು ಶ್ರೀ ಪ್ರಲ್ಹಾದ ಜೋಶಿ ಅವರು ವಿವರಿಸಿದರು. ಬೆಂಗಳೂರಿನಿಂದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಹಿರೇಮನೆ ಅವರು ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸಿದ್ದರು. ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಪ್ರಭಾರಿ ಹಾಗೂ ಸಹ ಪ್ರಭಾರಿಗಳು, ವಿಭಾಗ ಸಂಘಟನಾ ಕಾರ್ಯದರ್ಶಿ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳು, ರಾಜ್ಯ ಪ್ರಶಿಕ್ಷಣ ತಂಡ, ಜಿಲ್ಲಾ ಪ್ರಭಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಸಂಸದರು, ಶಾಸಕರು, ಎಲ್ಲಾ ಪ್ರಕೋಷ್ಠಗಳ ರಾಜ್ಯ ಸಂಚಾಲಕರು ಮತ್ತು ಸಹ ಸಂಚಾಲಕರು ಈ ಪ್ರಶಿಕ್ಷಣ ವರ್ಗದಲ್ಲಿ ವೆಬೆಕ್ಸ್ ಮೂಲಕ ಭಾಗವಹಿಸಿದ್ದರು.