ಮಂಗಳೂರು: ಭಾರತದಿಂದ ಯುಎಇಗೆ ತೆರಳುವ ವಿಮಾನಕ್ಕೆ ಹಲವು ತಿಂಗಳು ನಿಷೇಧ ಹೇರಿದ್ದ ಯುಎಇ ಸರ್ಕಾರ ಆಗಸ್ಟ್ 5ರಂದು ನಿಷೇಧ ಹಿಂತೆಗೆದು ಹಲವು ಷರತ್ತು ಗಳೊಂದಿಗೆ ಪ್ರಯಾಣಿಸಲು ಅನುಮತಿ ನೀಡಿತ್ತು.
Advertisement
ಯುಎಇ ರೆಸಿಡೆನ್ಸ್ ವಿಸಾ ಹೊಂದಿರಬೇಕು, ಎರಡು ವ್ಯಾಕ್ಸೀನೇಷನ್ ಪಡೆದಿರಬೇಕು, 48 ಘಂಟೆ ಮುಂಚೆ ಪಿಸಿಆರ್ ಟೆಸ್ಟ್ ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಪಡೆದಿರಬೇಕು ಎಂಬ ಷರತ್ತಿನೊಂದಿಗೆ ಪ್ರಯಾಣ ಹೊರಡುವ ಮುನ್ನ ವಿಮಾನ ನಿಲ್ದಾಣದಲ್ಲಿಯೂ ರ್‍ಯಾಪಿಡ್ ಆರ್ಟಿ ಪಿಸಿಆರ್ ಟೆಸ್ಟ್ ನಡೆಸಬೇಕು ಎಂಬ ಹೊಸ ಷರತ್ತು ಸೇರ್ಪಡೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್‍ಯಾಪಿಡ್ ಆರ್ಟಿ ಪಿಸಿಆರ್ ಟೆಸ್ಟ್ ವ್ಯವಸ್ಥೆ ಇಲ್ಲದ ಕಾರಣ ಮಂಗಳೂರಿನಿಂದ ಯುಎಇಗೆ ವಿಮಾನಯಾನ ಆರಂಭವಾಗಿಲ್ಲ. ಕರಾವಳಿಯ ಕರ್ನಾಟಕದ ಸಾವಿರಾರು ಅನಿವಾಸಿಗಳು ಯುಎಇಗೆ ತೆರಳಲು ಬೆಂಗಳೂರು, ಮುಂಬೈ ವಿಮಾನ ನಿಲ್ದಾಣದ ಮೊರೆ ಹೋಗಬೇಕಾಗಿತ್ತು. ಇದನ್ನೂ ಓದಿ: ಮೂರನೇ ದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ
Advertisement
Advertisement
ಅನಿವಾಸಿ ಕನ್ನಡಿಗರ ಈ ಸಮಸ್ಯೆಗಳ ಕುರಿತು ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾದ ಹಿದಾಯತ್ ಅಡ್ಡೂರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿರವರ ಗಮನಕ್ಕೆ ತಂದಾಗ ಅತೀ ಶೀಘ್ರದಲ್ಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದರು. ಅವರು ನೀಡಿದ ಭರವಸೆಯಂತೆ ಇಂದು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ರ್‍ಯಾಪಿಡ್ ಆರ್ಟಿ ಪಿಸಿಆರ್ ಟೆಸ್ಟ್ ಮಾಡುವ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಶೀಘ್ರವೇ ಮಂಗಳೂರು ಮೂಲಕ ಯುಎಇ ವಿಮಾನಯಾನ ಆರಂಭಗೊಳ್ಳಲಿದೆ.
Advertisement
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸ್ಪಂದನೆಗೆ ಹಿದಾಯತ್ ಅಡ್ಡೂರ್, ಕೆಎನ್‍ಆರ್‍ಐ ಯುಎಇ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಇ ಮೂಳೂರು, ಬಿ.ಡಬ್ಲ್ಯು.ಎಫ್ ಅಧ್ಯಕ್ಷ ಮಹಮ್ಮದ್ ಆಲಿ ಉಚ್ಚಿಲ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಸಲೀಂ, ಕನ್ನಡ ಮಿತ್ರರು ಯುಎಇ ಅಧ್ಯಕ್ಷ ಶಶಿಧರ ನಾಗರಾಜಪ್ಪ ಹಾಗೂ ಇತರ ಕನ್ನಡ ಪರ ಸಂಘಟನೆಗಳು, ಕನ್ನಡಿಗರು ಧನ್ಯವಾದ ವ್ಯಕ್ತಪಡಿಸಿದ್ದಾರೆ.