ಮಂಗಳೂರು: ಮಂಗಳೂರು ಪೊಲೀಸರು ಡ್ರಗ್ ವಿರುದ್ಧದ ಸಮರವನ್ನು ಮುಂದುವರಿಸಿದ್ದು, ಇಂದು ಮತ್ತೊಬ್ಬ ಪೆಡ್ಲರ್‍ನನ್ನು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಡ್ಯಾನ್ಸರ್ ಕಿಶೋರ್ ಅಮನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ ಶಾನ್ ಮುಂಬೈನಲ್ಲಿ ಬಂಧಿತನಾದ ಪ್ರಮುಖ ಪೆಡ್ಲರ್. ಮೂಲತಃ ಮಂಗಳೂರಿನ ಬಂದರು ನಿವಾಸಿಯಾಗಿರುವ ಶಾನ್, ತರುಣ್ ರಾಜ್‍ನ ಪಾರ್ಟಿಗಳಿಗೆ ಡ್ರಗ್ಸ್ ನೀಡುತ್ತಿದ್ದ. ಇತ್ತೀಚಿಗೆ ಬಂಧನವಾಗಿದ್ದ ಶಾಕೀರ್ ಮೂಲಕ ಡ್ರಗ್ಸ್ ಪಾರ್ಟಿಗಳಿಗೆ ಶಾನ್ ನಿಂದ ಡ್ರಗ್ಸ್ ಮಾಡಲಗುತ್ತಿತ್ತು ಎಂಬ ಮಾಹಿತಿ ಆಧರದ ಮೇಲೆ ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಮುಂಬೈ, ಗೋವಾದಿಂದ ಡ್ರಗ್ಸ್ ತರಿಸಿಕೊಡುತ್ತಿದ್ದ ಶಾನ್, ರಾಜ್ಯದ ವಿವಿಧೆಡೆ ನಡೆಯುವ ಪರ್ಟಿಗಳಿಗೆ ಸಪ್ಲೈ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಮಂಗಳೂರು ಸಿಸಿಬಿ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ.
Advertisement
ಡ್ರಗ್ಸ್ ಪ್ರಕರಣಕ್ಕೆ ಸಬಂಧಿಸಿದಂತೆ ಬಂಧಿತರಾಗಿರುವ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಹಾಗೂ ಅಕೀಲ್ ನೌಶೀನ್‍ನನ್ನು ಅಕ್ಟೋಬರ್ 9 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರನ್ನು ನಾರ್ಕೊಟಿಕ್ ಕ್ರೈಂ ಪೊಲೀಸರು ಈ ಹಿಂದೆ ಮಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ್ದ ಪೊಲೀಸರು, ಅ.9 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
Advertisement
ಸೆಪ್ಟೆಂಬರ್ 19ರಂದು ಮಂಗಳೂರಿನ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಿಂದ ಎಂಡಿಎಂ ಪೌಡರ್, ಬೈಕ್, 2 ಮೊಬೈಲ್ ಫೋನ್ ಸೇರಿದಂತೆ 1 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡೂ ಪ್ರಕರಣ ದಾಖಲಾಗಿದೆ.
ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದ. ಒಂದು ವರ್ಷದ ಊರಿಗೆ ಬಂದಿದ್ದ ಈತ, ಕಿಶೋರ್ ಅಮನ್ ಜೊತೆ ಡ್ಯಾನ್ಸರ್, ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಅಲ್ಲದೆ ಅಕೀಲ್ ನೌಶೀಲ್ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ. ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಈ ಹಿಂದೆ ಮಾಹಿತಿ ನೀಡಿದ್ದರು.