ಮಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಿಢೀರ್ ವರ್ಗಾವಣೆ ಮಾಡಿದ್ದರು. ಅಲ್ಲದೆ ಅವರ ಜಾಗಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಆಗಿದ್ದ ಮಹೇಶ್ ಪ್ರಸಾದ್ ನೇಮಕ ಮಾಡಲಾಗಿತ್ತು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ಸಿಸಿಬಿ ಇನ್ಸ್‌ಪೆಕ್ಟರ್ ವರ್ಗಾವಣೆಯನ್ನು ತಡೆ ಹಿಡಿದಿದೆ.
Advertisement
Advertisement
ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಡ್ರಗ್ಸ್ ಪ್ರಕರಣ ಸಂಬಂಧ ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು ಎನ್ನಲಾಗಿತ್ತು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿತ್ತು.
Advertisement
Advertisement
ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಪ್ರಕರಣದಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು.