ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಪುರಿ ನಗರದಲ್ಲಿ ಮಂಗಳವಾರ ರಾತ್ರಿ ದುರಂತ ಘಟನೆಯೊಂದು ನಡೆದಿದೆ.
ದಟ್ಟ ಮಂಜು ಆವರಿಸಿದ ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ ವಾಹನವೊಂದು ಅಪಘಾತಕ್ಕೀಡಾಗಿದೆ. ಹೀಗಾಗಿ 13 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
West Bengal: 13 people died in an accident in Dhupguri city of Jalpaiguri district last night, due to reduced visibility caused due to fog. The injured were taken to a hospital. pic.twitter.com/HHUvqCist6
— ANI (@ANI) January 20, 2021
ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಾಹನದಲ್ಲಿದ್ದವರ ಬಗ್ಗೆ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ತಂಡ ಘಟನೆ ನಡೆದ 10 ನಿಮಿಷದಲ್ಲಿಯೇ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೆ ಕ್ರೇನ್ ಮೂಲಕ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ದಟ್ಟ ಮಂಜು ಕವಿದ ಪರಿಣಾಮ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶಂಕೆ ವ್ಯಕ್ತಪಡಿಸಿದ್ದಾರೆ.