ಮಂಡ್ಯ: ಜಿಲ್ಲೆಯಲ್ಲಿ ಎದುರಾಗಿರುವ ಆಕ್ಸಿಜನ್ ಅಭಾವವನ್ನು ನೀಗಿಸಲು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಐದು ಟನ್ ಆಕ್ಸಿಜನ್ ಟ್ಯಾಂಕರ್‌ಗಳನ್ನು ನೀಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಹಲವು ದಿನಗಳಿಂದ ಆಕ್ಸಿಜನ್ ಕೊರತೆ ಎದುರಾಗಿದ್ದು, ಕೊರೊನಾ ಸೋಂಕಿತರು ಪರದಾಡುವಂತಹ ಸ್ಥಿತಿ ಎದುರಾಗಿದೆ. ಇದನ್ನು ಮನಗಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಐದು ಟನ್ ಆಕ್ಸಿಜನ್ ನೀಡುವ ಮೂಲಕ ಮಂಡ್ಯದ ಜನರ ನೆರವಿಗೆ ಧಾವಿಸಿದ್ದಾರೆ.
ಇಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಯೋಜನಾ ನಿರ್ದೇಶಕರಾದ ನಾರಾಯಣ ಅವರು ಮಿಮ್ಸ್ ನಿರ್ದೇಶಕರಾದ ಹರೀಶ್ ಅವರಿಗೆ ಹಸ್ತಾಂತರ ಮಾಡಿದರು. ಈ ವೇಳೆ ಮಂಡ್ಯ ತಹಶೀಲ್ದಾರ್ ಚಂದ್ರಶೇಖರ್ ಶಂ ಗಾಳಿ ಅವರು ಹಾಜರಿದ್ದರು.