ಮಂಡ್ಯ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿಯನ್ನು ನಿವೇದಿತಾ (26) ಎಮದು ಗುರುತಿಸಲಾಗಿದೆ. ಈಕೆ ಮಕ್ಕಳಾದ ಗಾನವಿ(6) ಹಾಗೂ ಉಲ್ಲಾಸ್(4) ನನ್ನು ಮೊದಲು ನೇಣಿಗೆ ಹಾಕಿ ಸಾಯಿಸಿದ್ದಾಳೆ. ನಂತನ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.
ನಲ್ಲಹಳ್ಳಿ ನಿವಾಸಿ ನಿವೇದಿತಾಳನ್ನು ಕಳೆದ 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಗಂಡ-ಹೆಂಡತಿ ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಿವೇದಿತಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.