ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರ ದೆಹಲಿ ಮಟ್ಟದಲ್ಲಿ ಸದ್ದು ಮಾಡಲು ಆರಂಭಿಸಿದ್ದರಿಂದ ಜಿಲ್ಲಾಡಳಿತ ಅಲರ್ಟ್ ಆಗಿದೆ. ಪಾಂಡವಪುರದ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ 11 ಕ್ರಷರ್ ಗಳ ಗುತ್ತಿಗೆಯನ್ನು ರದ್ದು ಮಾಡಲಾಗಿದೆ.
ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ನಾಗಮಂಗಲದಲ್ಲಿ ಎ-ಫಾರಂ ಹೊಂದದ 22 ಕ್ರಷರ್ ಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಅನಧಿಕೃತ ಕಲ್ಲುಗಣಿಗಾರಿಕೆ, ಅಕ್ರಮ ಸಾಗಾಣಿಕೆಗೆ ಬ್ರೇಕ್ ಹಾಕಲು ತಾಲೂಕುವಾರು ಕಂದಾಯ, ಅರಣ್ಯ, ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿದೆ.
Advertisement
Advertisement
ಜಿಲ್ಲೆಯಾದ್ಯಂತ 11 ಚೆಕ್‍ಪೋಸ್ಟ್ ನಿರ್ಮಿಸಲು ಆದೇಶಿಸಲಾಗಿದೆ. ಏಪ್ರಿಲ್‍ನಿಂದ ಇಲ್ಲಿಯವರೆಗೆ 12 ಪ್ರಕರಣ ದಾಖಲಾಗಿದ್ದು, 119 ವಾಹನ ವಶಕ್ಕೆ ಪಡೆಯಲಾಗಿದೆ. 33.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಇಲಾಖೆ ಅಧಿಕಾರಿ ಪದ್ಮಜಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ಕೆಆರ್‌ಎಸ್ ಸುತ್ತಲಿನ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ- ಕೇಂದ್ರ ಸಚಿವರಿಗೆ ಸುಮಲತಾ ಮನವಿ
Advertisement
#savekrsdam #StopIllegalMining https://t.co/8f3SdLxdff pic.twitter.com/7GR5pGYDYJ
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) July 30, 2021
Advertisement
ಇತ್ತೀಚಿಗೆ ಕೆಆರ್‌ಎಸ್ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಸಮರ ಸಾರಿದ್ದರು. ಈ ಮಧ್ಯೆ, ಬೇಬಿಬೆಟ್ಟದ ನಿಷೇಧಿತ ಗಣಿ ಪ್ರದೇಶದಲ್ಲಿ 11 ಡಿಟೋನೇಟರ್, 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಇವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.