ಮಂಡ್ಯ: ಮಹಾಮಾರಿ ಕೊರೊನಾಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
55 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಮೃತಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
Advertisement
Advertisement
ಮೃತ ವ್ಯಕ್ತಿ ಈಗಾಗಲೇ ಪಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದರು. ಜುಲೈ 5ರಂದು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದರು. ವ್ಯಕ್ತಿಯ ರಿಪೋರ್ಟ್ ಕೊರೊನಾ ಪಾಸಿಟಿವ್ ಬಂದಿದೆ.
Advertisement
ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಮೈಸೂರಿನ ಆಸ್ಪತ್ರೆ ಸಿಬ್ಬಂದಿ ವ್ಯಕ್ತಿಯನ್ನು ಮಂಡ್ಯ ಕೋವಿಡ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಸೋಮವಾರ ರಾತ್ರಿ ಮಂಡ್ಯ ಕೋವಿಡ್ ಆಸ್ಪತ್ರೆಗೆ ಬಂದ 10 ನಿಮಿಷದೊಳಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಮಂಡ್ಯ ಡಿಹೆಚ್ಓ ಮಂಚೇಗೌಡ ಮಾಹಿತಿ ನೀಡಿದ್ದಾರೆ.
Advertisement