ಮಂಡ್ಯ: ಲಾಕ್‍ಡೌನ್ ನಿಯಮ ಮೀರಿ ಅದ್ಧೂರಿಯಾಗಿ ಆಯೋಜನೆ ಮಾಡಿರುವ ಮದುವೆ ಕಾರ್ಯಕ್ರಮಕ್ಕೆ ತಹಶೀಲ್ದಾರ್ ದಾಳಿ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದ ಹೊರ ಹೊಲಯದಲ್ಲಿರುವ ಅಂಬೆಗಾಲು ಕೃಷ್ಣ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮದ ಮೇಲೆ ದಾಳಿ ಮಾಡಿದ ತಹಶೀಲ್ದಾರ್ ಮೇಲೆ ವಧು-ವರನ ಕುಟುಂಬಸ್ಥರು ಹಲ್ಲೆ ಯತ್ನ, ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Advertisement
Advertisement
ಗ್ರಾ.ಪಂ ಸದಸ್ಯ ಮಹೇಶ್ ಎಂಬವರ ಮಗಳ ಮದುವೆಗೆ ಯಾವುದೇ ಅನುಮತಿ ಪಡೆಯದೆ ಲಾಕ್‍ಡೌನ್ ನಿಯಮ ಮೀರಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ಮದುವೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವಿಚಾರ ತಿಳಿದು ಅಧಿಕಾರಿಗಳು ಮಂಡ್ಯ ತಹಶಿಲ್ದಾರ್ ಚಂದ್ರಶೇಖರ್ ಶಂಗಾಳಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
Advertisement
ದಾಳಿ ವೇಳೆ ಅಧಿಕಾರಿಗಳು ಮದುವೆ ನಿಲ್ಲಿಸುವಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದರು. ಈ ವೇಳೆ ಅಧಿಕಾರಿಗಳು ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದದ ನಡುವೆ ತಹಶೀಲ್ದಾರ್ ಚಂದ್ರಶೇಖರ್ ಶಂಗಾಳಿ ಮೇಲೆ ಹಲ್ಲೆ ನಡೆಸಲು ಯತ್ನಿಸಲಾಗಿದೆ.
Advertisement
ಅಧಿಕಾರಿಗಳು 3 ಕಾರುಗಳನ್ನ ಸೀಜ್ ಮಾಡಿದ್ದಾರೆ. ಅಲ್ಲದೆ ಪ್ರಕೃತಿ ವಿಕೋಪ ತಡೆ ಕಾಯ್ದೆ, ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಕಾಯ್ದೆ ಅಡಿ ದೂರು ದಾಖಲಾಗಿದೆ. ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.