ಬೆಂಗಳೂರು: ಮಂಡ್ಯ ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಹತ್ಯೆಯಾದ ಮೂವರು ಅರ್ಚಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ
ದೇವಾಲಯದ ಆವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ ಮೂವರನ್ನು ಗಣೇಶ್, ಪ್ರಕಾಶ್ ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ಸೆಕ್ಯೂರಿಟಿಯಾಗಿಯೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದೀಗ ಈ ಮೂವರ ಕುಟುಂಬದವರಿಗೂ ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
“ಮಂಡ್ಯದ ಅರ್ಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ತಿಳಿಸಿದ್ದಾರೆ.
ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಶ್ರೀ ಗಣೇಶ್, ಶ್ರೀ ಪ್ರಕಾಶ್ ಮತ್ತು ಶ್ರೀ ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. (1/2)
— CM of Karnataka (@CMofKarnataka) September 11, 2020
ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದಾರೆ. ಹೀಗಾಗಿ ಯಾರೋ ದುಷ್ಕರ್ಮಿಗಳು ಹುಂಡಿ ಹಣಕ್ಕಾಗಿ ಮೂವರನ್ನು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. (2/2)
— CM of Karnataka (@CMofKarnataka) September 11, 2020