ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ

Public TV
1 Min Read
MND TRIPAL MURDER

– ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮರ್ಡರ್

ಮಂಡ್ಯ: ಜಿಲ್ಲೆಯ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ದೇವಾಲಯದ ಅವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ ಮೂವರನ್ನು ಗಣೇಶ, ಪ್ರಕಾಶ ಮತ್ತು ಆನಂದ ಎಂದು ಗುರುತಿಸಲಾಗಿದೆ. ಈ ಮೂವರು ದೇವಸ್ಥಾನದಲ್ಲಿ ಅರ್ಚಕರಾಗಿಯೂ ಮತ್ತು ಸೆಕ್ಯೂರಿಟಿಯಾಗಿಯೂ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

MND TRIPAL MURDER 2

ಮಲಗಿದ್ದ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೊತೆಗೆ ಹುಂಡಿ ಹೊತ್ತೊಯ್ದು ದೇವಾಲಯದ ಹೊರಗೆ ಬೀಸಾಡಿದ್ದಾರೆ. ಹೀಗಾಗಿ ಯಾರೋ ದುಷ್ಕರ್ಮಿಗಳು ಹುಂಡಿ ಹಣಕ್ಕಾಗಿ ಮೂವರನ್ನು ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MND TRIPAL MURDER 3

Share This Article
Leave a Comment

Leave a Reply

Your email address will not be published. Required fields are marked *