ನವದೆಹಲಿ: ಉಪ ಚುನಾವಣೆ ಬಳಿಕ ಸಂಪುಟ ಸರ್ಜರಿ ಮಾಡುತ್ತೇನೆ. ದೆಹಲಿಗೆ ಹೋಗಿ ಹೈಕಮಾಂಡ್ ಒಪ್ಪಿಗೆ ಪಡೆಯುತ್ತೇನೆ ಎಂದು ಸಿಎಂ ಯಡಯೂರಪ್ಪ ಘೋಷಿಸಿದ್ದೇ ತಡ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ತೀವ್ರಗೊಂಡಿದೆ.
ಮಂತ್ರಿಗಿರಿಗಾಗಿ ಆಕಾಂಕ್ಷಿಗಳು ತಮ್ಮದೇ ಮೂಲಗಳ ಮೂಲಕ ಲಾಬಿ ಆರಂಭಿಸಿದ್ದಾರೆ. ವಿಶ್ವನಾಥ್‍ಗೆ ಮಂತ್ರಿಸ್ಥಾನ ಕೈತಪ್ಪಬಹುದು ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ಅವರು, ಇನ್ನೋರ್ವ ಆಕಾಂಕ್ಷಿ ಶಂಕರ್ ಜೊತೆ ಸಿಎಂಗೆ ಮುನ್ನವೇ ದೆಹಲಿಗೆ ದೌಡಾಯಿಸಿದ್ದಾರೆ.
Advertisement
Advertisement
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಭೇಟಿಗೆ ತೀವ್ರ ಪ್ರಯತ್ನ ನಡೆಸಿದ್ದಾರೆ. ಸೋಮವಾರ ಬೆಳ್ಳಂಬೆಳಗ್ಗೆ ಕೊಲ್ಕೊತಾಗೆ ತೆರಳಲಿರುವ ಹೂಗ್ಲಿ ನದಿ ದಂಡೆಯಲ್ಲಿರುವ ಕಾಳಿಮಾತಾ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸಂಜೆ ಹೊತ್ತಿಗೆ ದೆಹಲಿ ತಲುಪಲಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನ ಮುಂದುವರೆಸಲಿದ್ದಾರೆ.
Advertisement
ಈ ಮಧ್ಯೆ, ಕಾಗಿನೆಲೆಯಲ್ಲಿ ಮಾತನಾಡಿದ ಸಚಿವ ಸ್ಥಾನದ ಆಕಾಂಕ್ಷಿ ಎಂಟಿಬಿ ನಾಗರಾಜ್ ಉಪಚುನಾವಣೆ ಫಲಿತಾಂಶದ ಬಳಿಕ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುವುದು ಪಕ್ಕಾ ಎಂದಿದ್ದಾರೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ಹೀಗಾಗಿ ನಾನು ಮತ್ತೆ ಸಚಿವನಾಗ್ತೇನೆ. ಯಾವ ಖಾತೆಯನ್ನಾದ್ದರೂ ಕೊಡಲಿ, ಅದನ್ನು ನಾನು ನಿಭಾಯಿಸುತ್ತೇನೆ ಎಂದಿದ್ದಾರೆ