ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರು. ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.
ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ ಎಲ್ಲೆಡೆ ಪಸರಿಸಲಿ. ಈ ಸುಗ್ಗಿಕಾಲವು ಎಲ್ಲರಿಗೂ ಆರೋಗ್ಯ, ಯಶಸ್ಸು, ನಲಿವುಗಳನ್ನು, ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ, ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ ಎಂದು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳನ್ನ ಸಿಎಂ ತಿಳಿಸಿದ್ದಾರೆ.
Advertisement
Advertisement
ಇಂದು ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್‍ವೈ, ಅಸಮಾಧಾನ ಇದ್ದವರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ. ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಮಾತಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಶಾಸಕರು ಮಾಡೋದು ಬೇಡ. ವರಿಷ್ಠರು ಸರಿ ತಪ್ಪು ಯಾವುದು ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿ ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.
Advertisement
ನಾಡಿಗೆ ಆವರಿಸಿರುವ ಸಾಂಕ್ರಾಮಿಕದ ಕರಿಛಾಯೆ ದೂರಸರಿಯಲಿ, ಸಂತಸ, ಸಮೃದ್ಧಿಗಳ ಹೊಂಗಿರಣ ಎಲ್ಲೆಡೆ ಪಸರಿಸಲಿ. ಈ ಸುಗ್ಗಿಕಾಲವು ಎಲ್ಲರಿಗೂ ಆರೋಗ್ಯ, ಯಶಸ್ಸು, ನಲಿವುಗಳನ್ನು, ವಿಶೇಷವಾಗಿ ಅನ್ನದಾತ ರೈತನಿಗೆ ನೆಮ್ಮದಿಯನ್ನು ಹೊತ್ತು ತರಲಿ, ನಾಡು ಪ್ರಗತಿ ಪಥದಲ್ಲಿ ಮುನ್ನಡೆಯಲಿ. ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. pic.twitter.com/VfxgZ2aM08
— B.S.Yediyurappa (@BSYBJP) January 14, 2021