ಬೆಂಗಳೂರು: 5ನೇ ತರಗತಿ ಒಳಗಿನ ಮಕ್ಕಳು ಆನ್‍ಲೈನ್‍ನಲ್ಲಿ ಶಿಕ್ಷಣ ಪಡೆಯಲು ಇಚ್ಛಿಸಿದರೆ ಏಕೆ ತಡೆಯುತ್ತೀರಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ.
ಒಂದರಿಂದ ಐದನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣವನ್ನು ಸರ್ಕಾರ ರದ್ದು ಪಡಿಸಿದ್ದನ್ನು ಪ್ರಶ್ನಿಸಿ ಪ್ರಶ್ನಿಸಿ ಹೈಕೋರ್ಟ್‍ನಲ್ಲಿ ಕೆಲ ಶಾಲಾ ಆಡಳಿತ ಮಂಡಳಿಗಳು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮಕ್ಕಳು ಆನ್‍ಲೈನ್‍ನಲ್ಲಿ ಶಿಕ್ಷಣ ಪಡೆಯಲು ಇಚ್ಛಿಸಿದರೆ ಯಾಕೆ ತಡೆಯುತ್ತೀರಿ ಎಂದು ಸರ್ಕಾರದ ಪರ ವಕೀಲರಿಗೆ ಪ್ರಶ್ನಿಸಿದೆ.
Advertisement
Advertisement
ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ಅಭಿಮತ ವ್ಯಕ್ತಪಡಿಸಿದ ನ್ಯಾಯಾಲಯ, ಮೇಲ್ನೋಟಕ್ಕೆ ಸರ್ಕಾರ ಏಕಾಏಕಿ ಇಂತಹ ರದ್ದು ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಮಕ್ಕಳು ಆನ್ ಲೈನ್ ಮೂಲಕ ಶಿಕ್ಷಣ ಪಡೆಯಲು ಇಚ್ಚಿದರೆ ಸರ್ಕಾರ ಏಕೆ ತಡೆಯಬೇಕು ಎಂದು ಪ್ರಶ್ನಿಸಿದೆ.
Advertisement
ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಲು ಸರ್ಕಾರಿ ಅಭಿಯೋಜಕರು ಸಮಯಕ್ಕೆ ಕೋರಿದ ಹಿನ್ನೆಲೆಯಲ್ಲಿ ಕೋರ್ಟ್ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.
Advertisement
ಕೊರೊನಾ ಕಾರಣದಿಂದ ಶಾಲಾ, ಕಾಲೇಜುಗಳು ಬಂದ್ ಆಗಿದ್ದು, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಆರಂಭಿಸಿದ್ದವು. ಆದರೆ ಖಾಸಗಿ ಶಾಲೆಗಳ ಕ್ರಮಕ್ಕೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ 5ನೇ ತರಗತಿವರೆಗೂ ಆನ್‍ಲೈನ್ ಶಿಕ್ಷಣ ನಡೆಸದಂತೆ ಸೂಚನೆ ನೀಡಿ ಆದೇಶ ಜಾರಿ ಮಾಡಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿದ ಕೆಲ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿವೆ.