ಹುಬ್ಬಳ್ಳಿ: ಗುಂಡಿನ ದಾಳಿಗೆ ಒಳಗಾಗಿದ್ದ ರೌಡಿಶೀಟರ್ ಪ್ರೋಟ್ ಇರ್ಫಾನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಇದನ್ನೂ ಓದಿ: ಮಗನ ಮದುವೆ ವೇಳೆ ಗುಂಡಿನ ದಾಳಿ – ರೌಡಿ ಶೀಟರ್ ಫ್ರೋಟ್ ಇರ್ಫಾನ್ ಸ್ಥಿತಿ ಗಂಭೀರ
ರೌಡಿಶೀಟರ್ ಪ್ರೋಟ್ ಇರ್ಫಾನ್ ಗುರುವಾರ ಸಂಜೆ ಹಳೇ ಹುಬ್ಬಳ್ಳಿಯ ವಿಶಾಲ ನಗರದ ಕಲ್ಯಾಣ ಮಂಟಪದಲ್ಲಿ ಮಗನ ಮದುವೆ ಮುಗಿಸಿ ಬೀಗರಿಗೆ ಬೀಳ್ಕೊಡುಗೆ ನೀಡುತ್ತಿದ್ದ. ಈ ವೇಳೆ ಮೂವರು ಅಪರಿಚಿತರು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇರ್ಫಾನ್‍ನನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
Advertisement
Advertisement
ಪ್ರೋಟ್ ಇರ್ಫಾನ್ ದೇಹಕ್ಕೆ ಮೂರು ಗುಂಡು ಹೊಕ್ಕ ಪರಿಣಾಮ ತೀವ್ರ ರಕ್ತಸಾವ್ರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
Advertisement
ರೌಡಿಶೀಟರ್ ಇರ್ಫಾನ್ ಮೇಲೆ ಗುಂಡಿನ ದಾಳಿ ನಡೆಸಿದ ದೃಶ್ಯಗಳು ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಹಾಗೂ ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
Advertisement
ಪ್ರೋಟ್ ಇರ್ಫಾನ್ ಈ ಹಿಂದೆ ನಾಲ್ಕು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪರಿಣಾಮ ಆತನ ಮೇಲೆ ರೌಡಿಶೀಟರ್ ಕೇಸ್ ದಾಖಲಾಗಿತ್ತು. ಇರ್ಫಾನ್ ಮೇಲೆ ಗುಂಡಿನ ದಾಳಿ ನಡೆಯಲು ರಿಯಲ್ ಎಸ್ಟೇಟ್ ಉದ್ಯಮದ ಕಲಹವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರು ಎಲ್ಲ ರೀತಿಯ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
ಈ ಘಟನೆಯ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.