ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಮಾಜಿ ಸಚಿವ, ಶಾಸಕ ಜಮೀರ್ ಅಹಮದ್ ಅವರು ಭೇಟಿಯಾಗಿದ್ದಾರೆ.
ಮಗಳ ಮದುವೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಯನ್ನು ಆಹ್ವಾನಿಸಲೆಂದು ಜಮೀರ್, ದೇವೇಗೌಡರ ಮನೆಗೆ ತೆರಳಿದ್ದಾರೆ. ನಿನ್ನೆ ಪದ್ಮನಾಭನಗರ ನಿವಾಸಕ್ಕೆ ತೆರಳಿ ಮದುವೆಗೆ ಆಹ್ವಾನ ನೀಡಿದ್ದಾರೆ.
ಬಳಿಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿವಾಸಕ್ಕೆ ಕೂಡ ಜಮೀರ್ ಭೇಟಿ ನೀಡಿದ್ದಾರೆ. ಭವಾನಿ ರೇವಣ್ಣ ಅವರಿಗೆ ಆಹ್ವಾನ ಪತ್ರಿಕೆ ಮಗಳ ಮದುವೆಗೆ ಬರುವಂತೆ ತಿಳಿಸಿದ್ದಾರೆ.
ಜನವರಿ 21ರಂದು ಸಿಲಿಕಾನ್ ಸಿಟಿಯಲ್ಲಿರುವ ಪ್ಯಾಲೆಸ್ ನಲ್ಲಿ ಶಾಸಕರ ಪುತ್ರಿ ವಿವಾಹ ಸಮಾರಂಭ ನಡೆಯಲಿದೆ. ಶುಭ ಕಾರ್ಯದ ಹಿನ್ನೆಲೆಯಲ್ಲಿ ಶಾಸಕರು, ರಾಜಕೀಯ ನಾಯಕರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುತ್ತಿದ್ದಾರೆ. ವಿಶೇಷ ಅಂದರೆ ಶಾಸಕರು ಆಮಂತ್ರಣ ಪತ್ರಿಕೆಯ ಜೊತೆಗೆ ದೀಪ ಹಾಗೂ ಡ್ರೈ ಫ್ರೂಟ್ಸ್ ಇರುವ ಗಿಫ್ಟ್ ನೀಡಿದ್ದಾರೆ.