ಪಾಟ್ನಾ: ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ 20 ಸೈನಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೀಗಿದ್ದರೂ ಮಗ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾನೆ ಎಂದು ಪೋಷಕರು ನುಡಿದು ಹೆಮ್ಮೆಪಡುತ್ತಿದ್ದಾರೆ.
ಕರ್ನಲ್ ಸಂತೋಷ್ ಬಾಬು ಅವರ ತಾಯಿ ಮಂಜುಳಾ ಅವರು ಕೂಡ ಮಗ ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ ಎಂದು ಹೇಳಿದ್ದರು. ಈಗ ಬಿಹಾರದ ಸಹರ್ಸಾ ಮೂಲದ ಸಿಪಾಯಿ ಕುಂದನ್ ಕುಮಾರ್ ಅವರ ತಂದೆ ಮಗನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ದೇಶದ ಸೇವೆಗೆ ಮೊಮ್ಮಕ್ಕಳನ್ನು ಕಳುಹಿಸಿಕೊಡುವ ಮಾತಾಗಳನ್ನಾಡಿದ್ದಾರೆ. ಇದನ್ನೂ ಓದಿ: ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ
Advertisement
Advertisement
ಮಗ ಹುತಾತ್ಮನಾದ ಸುದ್ದಿ ತಿಳಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನನ್ನ ಮಗ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಕುಂದನ್ ಕುಮಾರ್ ತನ್ನ ಕರ್ತವ್ಯವನ್ನು ನಿಭಾಯಿಸಿದ್ದಾನೆ. ಮುಂದೆ ನನ್ನ ಇಬ್ಬರು ಮಕ್ಕಳು ಸೇನೆ ಸೇರಿ ದೇಶಸೇವೆ ಮಾಡುತ್ತಾರೆ. ಈ ಮೂಲಕ ದೇಶ ಸೇವೆ ಪರಂಪರೆಯನ್ನು ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮ ತಾಳ್ಮೆಯನ್ನು ಕೆಣಕಬೇಡಿ -ವೈರಿ ಚೀನಾಗೆ ಮೋದಿ ಖಡಕ್ ಸಂದೇಶ
Advertisement
#WATCH Bihar: Father of Sepoy Kundan Kumar, who lost his life in #GalwanValley of Ladakh on June 15-16, says, "My son sacrificed his life for the nation. I have two grandsons, I will send them too." pic.twitter.com/WHkkJw0HEX
— ANI (@ANI) June 17, 2020
Advertisement
ಪರಿಹಾರ:
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಹುತಾತ್ಮ ಯೋಧರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ. ಇಂಡೋ-ಚೀನಾ ಸಂಘರ್ಷದಲ್ಲಿ ಹುತಾತ್ಮರಾದ ಸೈನಿಕರಿಗೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ತಮ್ಮ ರಾಜ್ಯದ ಇಬ್ಬರು ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ ಮಾದರಿಯಾಗಿದ್ದಾರೆ.
CM @Naveen_Odisha expressed deep grief over death of two Odia soldiers in #galwanvalleyclash in #Ladakh. Hailing their supreme sacrifice for the motherland, CM announced ex-gratia of ₹25 lakh each from CMRF to next of kin of martyrs & conveyed sympathy to the bereaved families.
— CMO Odisha (@CMO_Odisha) June 17, 2020
ಇಂಡೋ-ಚೀನಾ ದಾಳಿಯಲ್ಲಿ ಪಶ್ಚಿಮ ಬಂಗಾಳದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಹೀಗಾಗಿ ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ಅವರು, ವೀರ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದ್ದಾರೆ.
Nothing can compensate for the supreme sacrifice made by them for the nation or the bereaved families' loss. We stand by the next of the sons of our soil in this difficult time. To this regard, we'll provide ₹5 lakh & a GoWB job to one member in the deceased's family. (2/2)
— Mamata Banerjee (@MamataOfficial) June 17, 2020