– ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಪಟೇಲ್
ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್.ಬಿರೆನ್ ಸಿಂಗ್(59) ಹಾಗೂ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬಿರೆನ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಬರೆದಿರುವ ಅವರು, ನನ್ನ ಕೊರೊನಾ ವರದಿಯು ಪಾಸಿಟಿವ್ ಬಂದಿದ್ದು, ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸೆಲ್ಫ್ ಐಸೋಲೇಟ್ ಆಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
Advertisement
I have tested positive for COVID-19. I request all those who came in close contact with me recently, to self isolate and get tested.
— N.Biren Singh (@NBirenSingh) November 15, 2020
Advertisement
ಬಿಜೆಪಿ ನಾಯಕ ಬಿರೆನ್ ಸಿಂಗ್ ಅವರು ಸದ್ಯ ಹೋಮ್ ಐಸೋಲೇಶನ್‍ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಹ್ಮದ್ ಪಟೇಲ್ ಅವರು ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ವಾರಗಳ ಹಿಂದಷ್ಟೇ ಅವರಿಗೆ ಕೊರೊನಾ ಸೋಂಕು ತಗುಲಿತ್ತು.
Advertisement
— Faisal Patel (@mfaisalpatel) November 15, 2020
ಅಹ್ಮದ್ ಪಟೇಲ್ ಮಗ ಫೈಸಲ್ ಅವರು ತಂದೆಯ ಆರೋಗ್ಯ ಸ್ಥಿತಿಗತಿ ಕುರಿತು ಹೇಳಿಕೆ ನೀಡಿದ್ದು, ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ. ಆದರೆ ವೈದ್ಯಕೀಯ ನಿಗಾದಲ್ಲಿ ಮುಂದುವರಿಯಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಅವರು ಬೇಗನೆ ಗುಣಮುಖರಾಗಲೆಂದು ಪ್ರಾರ್ಥಿಸಿ ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಫೈಸಲ್ ಅವರು ಸ್ಪಷ್ಟಪಡಿಸಿದ್ದಾರೆ.