– ಮದ್ವೆ ಆಗಿದ್ರೂ ದೈಹಿಕ ಸಂಬಂಧ ಮುಂದುವರಿಸಲು ಒತ್ತಾಯ
ಮುಂಬೈ: ಮದುವೆಯಾದ ನಂತರವೂ ತನ್ನೊಂದಿಗೆ ದೈಹಿಕ ಸಂಪರ್ಕ ಮುಂದುವರಿಸುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಾನ್ಸ್ಟೇಬಲ್ ವಿರುದ್ಧ ವಿಚ್ಛೇದಿತೆ 33 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇರೆಗೆ ಆರೋಪಿ ಕಾನ್ಸ್ಟೇಬಲ್ನನ್ನು ಬಂಧಿಸಲಾಗಿದೆ.
Advertisement
ಮಹಾರಾಷ್ಟ್ರದ ನಾಗ್ಪುರ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ವಿಕ್ರಮ್ ಸಿಂಗ್ ಬನಾಫರ್ (30) ಎಂದು ಗುರುತಿಸಲಾಗಿದೆ. ಈತ ನಾಗ್ಪುರ ನಗರ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದನು. ಸತತ ಮೂರು ವರ್ಷದಿಂದ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಕಾನ್ಸ್ಟೇಬಲ್ ಮೇಲೆ ಸಂತ್ರಸ್ತೆ ಆರೋಪ ಮಾಡಿದ್ದಾರೆ.
Advertisement
Advertisement
ಏನಿದು ಪ್ರಕರಣ?
ಸಂತ್ರಸ್ತೆ 2016ರಲ್ಲಿ ಮೊದಲ ಬಾರಿಗೆ ಆರೋಪಿಯನ್ನು ಭೇಟಿಯಾಗಿದ್ದರು. ನಂತರ 2017ರಲ್ಲಿ ಅವನು ಮನೀಶ್ ನಗರ ಪ್ರದೇಶದಲ್ಲಿದ್ದ ತನ್ನ ಸ್ನೇಹಿತನ ಮನೆಗೆ ಸಂತ್ರಸ್ತೆಯನ್ನು ಕರೆದಿದ್ದನು. ಅಲ್ಲಿ ಆಕೆಗೆ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ್ದ ಆಹಾರವನ್ನು ನೀಡಿದ್ದಾನೆ. ಅದನ್ನು ತಿಂದ ನಂತರ ಸಂತ್ರಸ್ತೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಈ ವೇಳೆ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆರೋಪಿ ಆ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಆರೋಪಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಸುಮಾರು ಮೂರು ವರ್ಷಗಳ ಕಾಲ ನನ್ನೊಂದಿಗೆ ಸೆಕ್ಸ್ ಮಾಡಿದ್ದಾನೆ. ಒಂದು ವೇಳೆ ನಾನು ಆರೋಪಿ ಜೊತೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದರೆ ಆ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಆರು ತಿಂಗಳ ಹಿಂದೆಯಷ್ಟೇ ಆರೋಪಿ ಇನ್ನೊಬ್ಬ ಮಹಿಳೆಯೊಂದಿಗೆ ಮದುವೆ ಮಾಡಿಕೊಂಡಿದ್ದನು. ಆದರೂ ತನ್ನೊಂದಿಗೆ ದೈಹಿಕ ಸಂಬಂಧವನ್ನು ಮುಂದುವರಿಸುವಂತೆ ಸಂತ್ರಸ್ತೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದನು. ಮದುವೆಯಾದ ನಂತರವೂ ಕಾನ್ಸ್ಟೇಬಲ್ ಕಿರುಕುಳ ನೀಡಲು ಪ್ರಾರಂಭಿಸಿದ್ದನು. ಹೀಗಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯಕ್ಕೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಆತನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಇನ್ಸ್ಪೆಕ್ಟರ್ ವಿಜಯ್ ತಿಳಿಸಿದ್ದಾರೆ.