ಭೋಪಾಲ್: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ನಡೆದ ದುರಂತ ಘಟನೆ ಮಾಸುವ ಮುನ್ನವೇ ಇದೀಗ ಮಧ್ಯಪ್ರದೇಶದಲ್ಲಿಯೂ ಅಂತದ್ದೇ ಘಟನೆ ನಡೆದಿದೆ.
ತನ್ನ ಸಹೋದರನ ಜೊತೆ ಮಲಗಿದ್ದ ಅಪ್ರಾಪ್ತೆಯನ್ನು ಮಧ್ಯರಾತ್ರಿ ಕಾಮುಕರು ಎಳೆದೊಯ್ದು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ
- Advertisement 2
- Advertisement 3
ಮಧ್ರಪ್ರದೇಶದ ಖಾರ್ಗೋನ್ ನ ಮಾರುಗ ಗ್ರಾಮದ ಜಮೀನೊಂದರ ಗುಡಿಸಲಿನಲ್ಲಿ ಅಪ್ರಾಪ್ತೆ ತನ್ನ ಸಹೋದರನ ಜೊತೆ ಮಲಗಿದ್ದಳು. ಈ ವೇಳೆ ಬೈಕಿನಲ್ಲಿ ಬಂದ ಮೂವರು ಕಾಮುಕರು ಸಹೋದರನ ಬಳಿ ಮಲಗಿದ್ದ ಬಾಲಕಿಯನ್ನು ಗುಡಿಸಲಿನಿಂದ ಹೊರಗೆ ಎಳೆದಿದ್ದಾರೆ. ಇತ್ತ ಬಾಲಕಿ ಕಿರುಚಾಡುತ್ತಿದ್ದಂತೆಯೇ ಎಚ್ಚರಗೊಂಡ ಸಹೋದರನಿಗೆ ಕಾಮುಕರು ಕೋಲಿನಿಂದ ಹಲ್ಲೆ ಮಾಡಿದ್ದಾರೆ. ನಂತರ ಬಾಲಕಿಯನ್ನು ಹೊಲಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಗ್ಯಾಂಗ್ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!
- Advertisement 4
ಬಾಲಕಿಯನ್ನು ಕಾಮುಕರು ಎಳೆದೊಯ್ಯುತ್ತಿದ್ದಂತೆಯೇ ಆಕೆಯ ಸಹೋದರ ಗ್ರಾಮಕ್ಕೆ ಓಡಿ ಹೋಗಿ ಕೂಗಾಡಿದ್ದಾನೆ. ಇದರಿಂದ ಗಾಬರಿಗೊಂಡ ಕಾಮುಕರು ಬೈಕನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಎಸ್ಪಿ ವಿವರಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.
ಕೃತ್ಯಕ್ಕೆ ಬಳಸಿರುವ ಬೈಕ್ ಕೂಡ ಕಳವು ಮಾಡಿದ್ದಾಗಿದೆ ಎಂದು ಎಸ್ಪಿ ತಿಳಿಸಿದ್ದು, ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ