ರಾಯಚೂರು: ಪ್ರೀತಿಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ.
ಮಲ್ಲಟ ಗ್ರಾಮದ ಮಹೇಶ (20) ಮತ್ತು ಅಕ್ಷತಾ (18) ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಗೆ ಜಾತಿ ಶತ್ರುವಾಗಿತ್ತು. ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರಿಂದ ಎರಡೂ ಮನೆಗಳಲ್ಲೂ ಇವರ ಪ್ರೀತಿಗೆ ಮನ್ನಣೆ ಸಿಕ್ಕಿಲ್ಲ. ಅಲ್ಲದೆ ಇತ್ತೀಚೆಗೆ ಯುವತಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಲಾಗಿತ್ತು.
Advertisement
Advertisement
ಮನೆಯವರನ್ನ ಒಪ್ಪಿಸಿ ಮದುವೆಯಾಗಲು ಅವಕಾಶಗಳಿಲ್ಲದ ಹಿನ್ನೆಲೆ ಇಬ್ಬರು ಸಾವಿಗೆ ಶರಣಾಗಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ವಿಷ ಸೇವನೆ ಮಾಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬಿದ್ದ ಯುವಕ ಯುವತಿ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.