ದಾವಣಗೆರೆ: ಯುವಕನೊಬ್ಬ ಮದುವೆಯಾಗಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ರಾಮೇಶ್ವರ ಗ್ರಾಮದಲ್ಲಿ ನಡೆದಿದೆ.
ವೀರೇಶ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಗ್ರಾಮದ ಪೌಲ್ಟ್ರಿ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ. ಮೂಲತಃ ಹರಪ್ಪನಹಳ್ಳಿ ತಾಲೂಕಿನ ಹರಕನಾಳ್ ಗ್ರಾಮದ ನಿವಾಸಿ.
ತನಗೆ ಮದುವೆ ಆಗಿಲ್ಲ ಎಂದು ವೀರೇಶ್ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.