ಲಕ್ನೋ: ಅಕ್ರಮ ಮದ್ಯ ಕಾರ್ಖಾನೆ ಮೇಲೆ ದಾಳಿ ನಡೆಸಿದ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಘಟನೆ ವೇಳೆ ತೀವ್ರವಾಗಿ ಗಾಯಗೊಂಡ ಕಾನ್ಸ್‌ಟೇಬಲ್ ದೇವೇಂದ್ರ ಮೃತಪಟ್ಟಿದ್ದು, ಸಬ್-ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ಈ ಕುರಿತಂತೆ ಮಾತನಾಡಿದ ಜಿಲ್ಲಾಧಿಕಾರಿ ಚಂದ್ರಪ್ರಕಾಶ್ ಸಿಂಗ್, ಸಿಧ್ಪುರ್ ಪೊಲೀಸ್ ಠಾಣಾ ಪ್ರದೇಶದ ನಾಗ್ಲಾ ಧಿಮರ್ ಗ್ರಾಮದಲ್ಲಿರುವ ಅಕ್ರಮ ಮದ್ಯ ಕಾರ್ಖಾನೆ ಮೇಲೆ ಇವರು ದಾಳಿ ನಡೆಸಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪರಿಣಾಮ ಕಾನ್ಸ್‌ಟೇಬಲ್ ದೇವೇಂದ್ರ ತೀವ್ರ ಹೊಡೆತದಿಂದ ಮೃತಪಟ್ಟಿದ್ದು, ಇನ್ಸ್‌ಪೆಕ್ಟರ್ ಅಶೋಕ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
Advertisement
ಘಟನೆ ವಿಚಾರವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತ ಕಾನ್ಸ್‌ಟೇಬಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ ಹಾಗೂ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Advertisement
ಅಲ್ಲದೆ ಯುಪಿ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಅಪರಾಧ ಮತ್ತು ಅಪರಾಧಿಗಳ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈ ಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.