ಮುಂಬೈ: ಕೊರೊನಾ ವೈರಸ್ ಮಹಾಮಾರಿಗೆ ಬಲಿಯಾಗುವವರ ಹಾಗೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವಜೋಡಿಯೊಂದು ಸತ್ಪಾಲಾ ಗ್ರಾಮದಲ್ಲಿರುವ ಕೋವಿಡ್ ಆಸ್ಪತ್ರೆಗೆ 50 ಬೆಡ್ ಹಾಗೂ ಆಕ್ಸಿಜನ್ ಸಿಲಿಂಡರ್ ನೀಡಿ ಮಾನವೀಯತೆ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ.
Advertisement
ಈ ಘಟನೆ ಮಹಾರಾಷ್ಟ್ರದ ವಾಸೈನಲ್ಲಿರುವ ನಂದಕುಲ ಗ್ರಾಮದಲ್ಲಿ ನಡೆದಿದೆ. ಎರಿಕ್ ಆ್ಯಂಟನ್ ಲೊಬೊ(28) ಹಾಗೂ ಮೆರ್ಲಿಣ್(27) ಎಂಬ ಜೋಡಿ ಈ ರೀತಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
Advertisement
Advertisement
ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಇವರ ಮದುವೆಗೆ ಸಾಮಾನ್ಯವಾಗಿ ಸುಮಾರು 2 ಸಾವಿರ ಮಂದಿ ಸೇರುವವರಿದ್ದರು. ಅಲ್ಲದೆ ವೈನ್ ಹಾಗೂ ಒಳ್ಳೆಯ ಊಟ ಇಲ್ಲವೆಂದರೆ ಇವರ ಮದುವೆ ಅಪೂರ್ಣವೆಂದೇ ಅರ್ಥ. ಇದಕ್ಕಾಗಿ ಸಾಕಷ್ಟು ಹಣ ಖರ್ಚಾಗುತ್ತದೆ. ಹೀಗಾಗಿ ಈ ಹಣವನ್ನು ಬೇರೆ ರೀತಿಯಲ್ಲಿ ಬಳಕೆ ಮಾಡಲು ತೀರ್ಮಾನಿದೆವು ಎಂದು ಲೊಬೊ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
Advertisement
ಕೊರೊನಾ ವೈರಸ್ ಹಿನ್ನೆಲೆಯಿಂದಾಗಿ ಮದುವೆಗೆ ಕೇವಲ 22 ಮಂದಿಯಷ್ಟೇ ಭಾಗಿಯಾಗಿದ್ದು ಎಲ್ಲರೂ ಮಾಸ್ಕ್ ಧರಿಸಿದ್ದರು. ಅಲ್ಲದೆ ಸಾಮಾಜಿಕ ಅಂತರ ಕೂಡ ಕಾಯ್ದುಕೊಳ್ಳಲಾಗಿತ್ತು. ಪಲ್ಘಾರ್ ಜಿಲ್ಲೆಯಲ್ಲಿ ಸರಿಸುಮಾರು 90 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸುಮಾರು 1, 500ಕ್ಕಿಂತಲೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಹೀಗಾಗಿ ನಾವು ಕೋವಿಡ್ ಆಸ್ಪತ್ರೆಗೆ ಬೆಡ್ ಹಾಗೂ ಆಕ್ಸಿಜನ್ ಸಿಲಿಂಡರ್ ನೀಡುವ ನಿರ್ಧಾರಕ್ಕೆ ಬಂದೆವು ಎಂದು ವಿವರಿಸಿದ್ದಾರೆ.
ಲೊಬೊ ಮತ್ತು ಮರ್ಲಿನ್ ಕಳೆದ ಮಾರ್ಚ್ ತಿಂಗಳಿನಲ್ಲಿ ಈ ಬಗ್ಗೆ ಶಾಸಕ ಕ್ಷಿತಿಜಿ ಠಾಕೂರ್ ಬಳಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದರು. ಈ ವೇಳೆ ಶಾಸಕರು, ಜಿಲ್ಲಾಧಿಕಾರಿ ಡಾ. ಕೈಲಾಸ್ ಶಿಂಧೆ ಅವರ ಗಮನಕ್ಕೆ ತಂದರು. ಜೋಡಿಯ ಐಡಿಯಾಕ್ಕೆ ಜಿಲ್ಲಾಧಿಕಾರಿ ಕೂಡ ಸಾಥ್ ನೀಡಿದ್ದು, ವಿಶೇಷ ಯೋಜನೆಗೆ ಜಿಲ್ಲಾಧಿಕಾರಿ ಗ್ರೀನ್ ಸಿಗ್ನಲ್ ನೀಡಿದರು.
ಆ ನಂತರ ಜೋಡಿ ವಾಸೈನಲ್ಲಿರುವ ಆಸ್ಪತ್ರೆಯ ಬೆಡ್ ತಯಾರು ಮಾಡುವವರ ಬಳಿ ಹೋಗಿ ವಿವರಿಸಿದ್ದಾರೆ. ಅಲ್ಲದೆ ಉತ್ತಮವಾದ ಹಾಸಿಗೆ, ಹೊದಿಕೆ, ತಲೆದಿಂಬು, ಬೆಡ್‍ಶೀಟ್ ಹಾಗೂ ಇತರ ಅಗತ್ಯ ವಸ್ತುಗಳ ತಯಾರು ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಗೆ ಅಗತ್ಯವಾಗಿ ಬೇಕಾಗುವ ಆಕ್ಸಿಜನ್ ಸಿಲಿಂಡರ್ ಕೂಡ ನೀಡಲು ತೀರ್ಮಾನಿಸದೆವು ಎಂದು ಲೊಬೊ ಹೇಳಿದ್ದಾರೆ.
ಸಮಾಜಕ್ಕೆ ಜೋಡಿ ನೀಡಿದ ಕೊಡುಗೆಗೆ ಶಾಸಕರು ಧನ್ಯವಾದ ಅರ್ಪಿಸಿದ್ದಾರೆ. ಸದ್ಯ ಜೋಡಿ ವಲಸೆ ಕಾರ್ಮಿಕರು ಸೇರಿದಂತೆ ಸಾಕಷ್ಟು ಮಂದಿಗೆ ಸಹಾಯ ಮಾಡುತ್ತಿದೆ.