– ಅಕ್ಕಪಕ್ಕದ ಮನೆಯಲ್ಲಿ ವಾಸಿಸುತ್ತಿದ್ರು
– 6 ತಿಂಗಳಿನಿಂದ ಅವಿವಾಹಿತ ಯುವಕನ ಜೊತೆ ಸಂಬಂಧ
ಲಕ್ನೋ: 21 ವರ್ಷದ ಯುವಕ ಮತ್ತು 20 ವರ್ಷದ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ. ಕಳೆದ ಆರು ತಿಂಗಳಿನಿಂದ ವಿವಾಹಿತ ಮಹಿಳೆ ಮತ್ತು ಅವಿವಾಹಿತ ಯುವಕ ಸಂಬಂಧದಲ್ಲಿದ್ದರು ಎಂದು ತಿಳಿದುಬಂದಿದೆ. ಆದರೆ ಇಬ್ಬರೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಅವರಲ್ಲಿ ಒಬ್ಬರು ಗುಂಡು ಹಾರಿಸಿದ್ದಾರ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಕ್ಟರ್ 123ರ ಅಂಬೇಡ್ಕರ್ ಕಾಲೋನಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮೃತರಿಬ್ಬರು ದೈನಂದಿನ ಕೂಲಿ ಕೆಲಸ ಮಾಡುತ್ತಿದ್ದು, ಜೀವನ ಸಾಗಿಸುತ್ತಿದ್ದರು. ಅಕ್ಕಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಅವರು ಅನೈತಿಕ ಸಂಬಂಧದಲ್ಲಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
20ರ ಯುವತಿಗೆ ಈಗಾಗಲೇ ಮದುವೆಯಾಗಿತ್ತು. ಇದರಿಂದ ಇಬ್ಬರು ಒಟ್ಟಿಗಿರಲು ಸಾಧ್ಯವಾಗಲಿಲ್ಲ. ಇದೇ ಇವರ ಸಾವಿಗೆ ಕಾರಣವಾಗಿದೆ. ಸದ್ಯಕ್ಕೆ ಘಟನೆ ನಡೆದ ಸ್ಥಳದಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ ಈವರೆಗೆ ಯಾರೊಬ್ಬರೂ ಇವರ ಸಾವಿನ ಬಗ್ಗೆ ದೂರು ನೀಡಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಹರೀಶ್ ಚಂದರ್ ತಿಳಿಸಿದ್ದಾರೆ.