Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮದ್ವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ

Chamarajanagar

ಮದ್ವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
Last updated: October 29, 2020 12:35 pm
Public TV
Share
2 Min Read
cng court 2
SHARE

ಚಾಮರಾಜನಗರ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಚಾಮರಾಜನಗರದ ಗಾಳೀಪುರ ಬಡಾವಣೆಯ (ಹಾಲಿ ವಾಸ ಚಾಮರಾಜನಗರ ತಾಲೂಕು ಸರಗೂರು) ಶಮೀವುಲ್ಲಾ ಅಲಿಯಾಸ್ ಡಾಮ್ಟೆ ಅಲಿಯಾಸ್ ಸಲ್ಮಾನ್ ಅಲಿಯಾಸ್ ಪ್ರೀತಂ ಎಂಬ ಆರೋಪಿಗೆ ಐಪಿಸಿ ಕಲಂ 366ರ ಅನ್ವಯ 5 ವರ್ಷ ಸಾದಾ ಸಜೆ ಮತ್ತು 50 ಸಾವಿರ ರೂ. ದಂಡ, ಐಪಿಸಿ ಕಲಂ 376(ಎನ್) ಅನ್ವಯ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ ಹಾಗೂ ಪೊಕ್ಸೊ ಕಾಯ್ದೆ ಕಲಂ 4 ರ ಅನ್ವಯ 7 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ, ಪೊಕ್ಸೊ ಕಾಯ್ದೆ ಕಲಂ 6 ರ ಅನ್ವಯ 10 ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್ ಪುರ ಅವರು ತೀರ್ಪು ನೀಡಿದ್ದಾರೆ.

cng court 1

ಆರೋಪಿ ಶಮೀವುಲ್ಲಾ ಸ್ಟವ್ ಮತ್ತು ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದು, ಈತ ಚಾಮರಾಜನಗರ ಗ್ರಾಮವೊಂದರ ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ 2018ರ ಜುಲೈ 24 ರಂದು ತಮಿಳುನಾಡಿನ ತಮಿಳುಪುರ ಎಂಬ ಗ್ರಾಮಕ್ಕೆ ತನ್ನ ಮೋಟಾರ್ ಬೈಕ್ ನಲ್ಲಿ ಕರೆದೊಯ್ದಿದ್ದ.

Rape 1 1

ಅಂದು ರಾತ್ರಿ ಬಾಲಕಿಯ ಇಷ್ಟಕ್ಕೆ ವಿರುದ್ಧವಾಗಿ ದೈಹಿಕ ಸಂಪರ್ಕ ಮಾಡಿದ್ದ. ನಂತರ ತಮಿಳುಪುರದಿಂದ ಹೊರಟು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ಖಾಸಗಿ ಲಾಡ್ಜ್‌ ವೊಂದರಲ್ಲಿ ಬಲವಂತವಾಗಿ ಇರಿಸಿ ಎರಡು ದಿನಗಳ ಕಾಲ ಬಾಲಕಿಯ ಇಷ್ಟಕ್ಕೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದ. ಗ್ರಾಮಕ್ಕೆ ವಾಪಸ್ ಬಂದು ಬಾಲಕಿ ನಡೆದ ವಿಷಯ ತಿಳಿಸಿದ್ದಳು. ಈ ಬಗ್ಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಅಂದಿನ ಡಿವೈಎಸ್‍ಪಿ ಅವರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಹೆಚ್.ಲೋಲಾಕ್ಷಿ ವಾದ ಮಂಡಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ಅಪ್ರಾಪ್ತ ಬಾಲಕಿಯ ಮೇಲೆ ಎಸಗಿರುವ ಕೃತ್ಯ ಸಾಬೀತಾಗಿದೆ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲಿ ಪೊಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿರುವುದು ಇದೇ ಮೊದಲು ಎಂದು ತಿಳಿದುಬಂದಿದೆ.

Police Jeep 1 2 medium

TAGGED:ChamarajanagaracourtgirlsPosco ActPublic TVrapeಅತ್ಯಾಚಾರಕೋರ್ಟ್ಚಾಮರಾಜನಗರಪಬ್ಲಿಕ್ ಟಿವಿಪೊಕ್ಸೊ ಕಾಯ್ದೆಬಾಲಕಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
20 minutes ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
58 minutes ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
2 hours ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
3 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
3 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?