ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಜೂಜಾಟ ಆಡುತ್ತಿದ್ದರು. ಅಲ್ಲದೇ ಈ ಜೂಜಾಟದಲ್ಲಿ ತಮಿಳು ನಟರೊಬ್ಬರು ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಟನ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. ಆಗ ಪೊಲೀಸರು ನಟ ಶ್ಯಾಮ್ ಸೇರಿದಂತೆ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಲಾಕ್‍ಡೌನ್ ನಡುವೆಯೂ ತಡರಾತ್ರಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ ಫ್ಲ್ಯಾಟ್‍ನಿಂದ ಜೂಜಾಟಕ್ಕೆ ಬಳಸಿದ ಟೋಕನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯಕ್ಕೆ ನಟ ಶ್ಯಾಮ್ ಮತ್ತು ಇತರ 11 ಮಂದಿಯನ್ನು ಬಂಧಿಸಲಾಗಿದೆ. ಟೋಕನ್‍ಗಳ ಬಳಕೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ಈ ಜೂಜಾಟದಲ್ಲಿ ಹಣದ ರೂಪದಲ್ಲಿ ಟೋಕನ್ ಗಳನ್ನು ಬಳಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಆನ್‍ಲೈನ್ ಜೂಜಾಟದಲ್ಲಿ ಸುಮಾರು 20 ಸಾವಿರ ಹಣವನ್ನು ಕಳೆದುಕೊಂಡಿದ್ದನು. ಇದೇ ಖಿನ್ನತೆಯಲ್ಲಿ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದನು. ಈ ಘಟನೆ ಬಳಿಕ ತಮಿಳುನಾಡಿನಲ್ಲಿ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲಾಕ್‍ಡೌನ್ ಸಮಯದಲ್ಲಿ ಕೆಲಸವಿಲ್ಲದ ಕಾರಣ ಯುವಕರು ಆನ್‍ಲೈನ್ ಮೂಲಕ ಜೂಜಾಟ ಆಟವಾಡುತ್ತಿದ್ದಾರೆ. ಇದರಿಂದ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಹೀಗಾಗಿ ಅನೇಕ ಆನ್‍ಲೈನ್ ಗೇಮ್‍ಗಳ ನಿಯಂತ್ರಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಪುಗಳೇಂದಿ ಹೇಳಿದ್ದಾರೆ. ಅಲ್ಲದೇ ಕೆಲವು ಆನ್‍ಲೈನ್ ಗೇಮ್‍ಗಳ ಪಟ್ಟಿಯನ್ನು ಕೂಡ ಮಾಡಿದ್ದಾರೆ.