ಹುಬ್ಬಳ್ಳಿ: ಕೋವಿಡ್-19 ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಧ್ಯರಾತ್ರಿ 12 ಗಂಟೆ ವೇಳೆಯಲ್ಲಿ ಪ್ಲಾಸ್ಮಾ ದಾನ ಮಾಡುವ ಮೂಲಕ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ.
Advertisement
ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಬಿ ಪಾಸಿಟಿವ್ ಪ್ಲಾಸ್ಮಾ ಅವಶ್ಯಕತೆ ಇದ್ದು, ಈ ಹಿನ್ನೆಲೆಯಲ್ಲಿ ಗಜಾನನ ಹಬೀಬ ಎಂಬವರು ಪ್ಲಾಸ್ಮಾ ದಾನ ಮಾಡಿದ್ದು, ಚಿಕಿತ್ಸೆಗೆ ಸಹಾಯ ಮಾಡಿದ್ದಾರೆ. ಅಲ್ಲದೆ ಕೊರೊನಾ ವೈರಸ್ ನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.
Advertisement
Advertisement
ಹುಬ್ಬಳ್ಳಿಯಲ್ಲಿ ಮೊದಲ ಬಾರಿಗೆ ಪ್ಲಾಸ್ಮಾ ಚಿಕಿತ್ಸೆ ಯಶ್ವಸಿಯಾದ ನಂತರ ಹಲವಾರು ಜನರು ಪ್ಲಾಸ್ಮಾ ದಾನ ಮಾಡುತ್ತಿದ್ದಾರೆ. ಅಲ್ಲದೆ ಸರ್ಕಾರ ಸಹ ಪ್ಲಾಸ್ಮಾ ದಾನಿಗಳಿಗೆ 5 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಹ ಘೋಷಣೆ ಮಾಡಿರುವುದರಿಂದ ಪ್ಲಾಸ್ಮಾ ಚಿಕಿತ್ಸೆ ಇತ್ತೀಚೆಗೆ ಯಶ್ವಸಿಯಾಗಿ ಸಾಗುತ್ತಿದೆ.
Advertisement