ತುಮಕೂರು: ಉಪಚುನಾವಣೆಯಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇಂದು ಮಧ್ಯಾಹ್ನವೇ ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡರು, ದಿವಂಗತ ಶಾಸಕ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಪಕ್ಷದಿಂದ ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಅಮ್ಮಾಜಮ್ಮ ಅವರಿಗೆ ಇಂದೇ ಕೊರೊನಾ ಪಾಸಿಟಿವ್ ಬಂದಿದೆ. ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ತಾಯಿಗೆ ಕೊರೊನಾ ಬಂದ ವಿಚಾರವಾಗಿ ಮಾತನಾಡಿರುವ ಅಮ್ಮಾಜಮ್ಮ ಪುತ್ರ ಸತ್ಯ ಪ್ರಕಾಶ್, ವಿಧಿ ನಮ್ಮ ಕುಟುಂಬದ ಜೊತೆ ಚೆಲ್ಲಾಟ ಆಡುತಿದೆ. ಎರಡು ತಿಂಗಳ ಹಿಂದೆ ತಂದೆ ತೀರಿಸಿಕೊಂಡರು. ಈಗ ತಾಯಿಗೆ ಕೊರೊನಾ ಬಂದಿದೆ. ಪಕ್ಷದಿಂದ ಟಿಕೆಟ್ ಘೋಷಣೆ ಮಾಡಿರೋದು ಸಂತಸ ತಂದಿದೆ. ನಮ್ಮ ತಾಯಿ ಕೊರೊನಾ ಗೆದ್ದು ಬಂದು ಚುನಾವಣೆನೂ ಗೆಲ್ಲುತ್ತಾರೆ. ಇನ್ನು ಐದು ದಿನದಲ್ಲಿ ಡಿಸ್ಚಾರ್ಜ್ ಆಗಿ ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.
Advertisement
Advertisement
ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದ ಹಿನ್ನೆಲೆ, ನವೆಂಬರ್ 3 ರಂದು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಸ್ಪರ್ಧಿಸಲಿದ್ದಾರೆ. ಈಗ ಜೆಡಿಎಸ್ ಪಕ್ಷ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಮೊದಲು ಸತ್ಯನಾರಾಯಣ ಅವರ ಮಗ ಸತ್ಯ ಪ್ರಕಾಶ್‍ಗೆ ಟಿಕೆಟ್ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇಂದು ದೇವೇಗೌಡರು ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.