– ಓರ್ವ ಪುರುಷ, ಇಬ್ಬರು ಮಹಿಳೆಯರು, ಎರಡು ಕಂದಮ್ಮಗಳು
– ಗ್ರಾಮದಲ್ಲಿ ಆತಂಕ
ರಾಯ್ಪುರ: ಛತ್ತೀಸಗಢ ರಾಜ್ಯದ ರಾಜಧಾನಿ ರಾಯ್ಪುರ ಅನತಿ ದೂರದಲ್ಲಿರುವ ಕೇಂದ್ರಿ ಗ್ರಾಮದಲ್ಲಿ ಒಂದೇ ಕುಟುಂಬ ಐವರ ಶವಗಳು ಪತ್ತೆಯಾಗಿದ್ದು, ಕೊಲೆಯೊ? ಆತ್ಮಹತ್ಯೆಯೋ ಎಂದು ತಿಳಿದು ಬಂದಿಲ್ಲ.
ಕಮಲೇಶ್ ಸಾಹು ಕುಟುಂಬಸ್ಥರ ಶವ ಮನೆಯಲ್ಲಿ ಸಿಕ್ಕಿದ್ದು, ಗ್ರಾಮದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ರೀತಿಯಲ್ಲಿ ಪ್ರಕರಣ ಬಿಂಬಿತವಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಮತ್ತು ಸಂಬಂಧಿಕರಿಂದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ವೀಡಿಯೋ ಮಾಡಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ– ಚಲಿಸುತ್ತಿರುವ ರೈಲಿನ ಮುಂದೆ ಹಾರಿದ್ರು
Advertisement
Advertisement
ಕಮಲೇಶ್ ಸಾಹು ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ರೆ, ಇನ್ನುಳಿದ ನಾಲ್ಕು ಶವಗಳು ಹಾಸಿಗೆ ಮೇಲಿದ್ದವು ಎಂದು ವರದಿಯಾಗಿದೆ. ಕಮಲೇಶ್ ಕುಟುಂಬ ಸಾವಿನಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರು ಒಂದು ರೀತಿ ಭಯಭೀತರಾಗಿದ್ದಾರೆ. ಇದನ್ನೂ ಓದಿ: ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ
Advertisement
Advertisement
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಮಂತ್ರಿ ತಾಮ್ರಧ್ವಜ್ ಸಾಹೂ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಗ್ರಾಮಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಶವಗಳನ್ನ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆ ಗ್ರಾಮದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅತ್ತೆ, ಮಾವ, ಪತ್ನಿ, ಪ್ರಿಯಕರನೇ ಕಾರಣ – ಸೆಲ್ಫಿ ವೀಡಿಯೋ ಮಾಡಿ ವಿವಾಹಿತ ಆತ್ಮಹತ್ಯೆ
ಐವರ ಸಾವು ಹೇಗಾಯ್ತು ಎಂಬುವುದು ಇಲ್ಲಿಯವರೆಗೂ ಸ್ಪಷ್ಟವಾಗಿಲ್ಲ. ಮೇಲ್ನೋಟಕ್ಕೆ ಸಾಮೂಹಿಕ ಆತ್ಮಹತ್ಯೆ ಎಂದು ಶಂಕೆ ವ್ಯಕ್ತವಾಗಿದ್ದು, ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ಈ ಸಂದರ್ಭದಲ್ಲಿ ಏನನ್ನೂ ಊಹಿಸಲು ಸಾಧ್ಯವಾಗುತ್ತಿಲ್ಲ. ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದ್ದು, ಮೃತ ಕುಟುಂಬದ ಹಿನ್ನೆಲೆ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಮರಣೋತ್ತರ ಶವ ಪರೀಕ್ಷೆಯಲ್ಲಿ ಸಾವು ಹೇಗಾಯ್ತು ಎಂಬುದರ ಬಗ್ಗೆ ತಿಳಿಯಲಿದೆ ಎಂದು ಎಎಸ್‍ಪಿ ತಾಲೇಶ್ವರ ಹೇಳಿದ್ದಾರೆ. ಇದನ್ನೂ ಓದಿ: ನನ್ನದೇನೂ ತಪ್ಪಿರ್ಲಿಲ್ಲ, ಆದ್ರೂ ಬ್ರೇಕಪ್ ಮಾಡ್ಕೊಂಡ್ಳು- ಡೆತ್‍ನೋಟ್ ಬರೆದು ಆತ್ಮಹತ್ಯೆ