ಭೋಪಾಲ್: ಸರ್ಕಾರಿ ಶಾಲಾ ಶಿಕ್ಷಕನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ.
ಅತ್ಯಾಚಾರಕ್ಕೊಳಗಾದ ಬಾಲಕಿ 13 ವರ್ಷದವಳಾಗಿದ್ದಾಳೆ. ಈಕೆ ಬಡ ಕುಟುಂಬದ ಹೆಣ್ಣು ಮಗಳಾಗಿದ್ದಳು. ಈ ವಿಚಾರವನ್ನು ದುರುಪಯೋಗಪಡಿಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ತಂದೆ 50 ವರ್ಷದ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧ ಥಾನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಒಂದು ದಿನ ಬಾಲಕಿ ಶಾಲಾ ಶಿಕ್ಷಕನ ಮನೆಗೆ ಹೋಗಿದ್ದಾಳೆ. ಜೊತೆಯಲ್ಲಿ ಅವಳ ತಮ್ಮನನ್ನು ಕರೆದುಕೊಂಡು ಹೋಗಿದ್ದಳು. ಬಾಲಕ ಟಿವಿ ನೋಡುತ್ತಾ ಕುಳಿತ್ತಿದ್ದ ಬಾಲಕಿ ಶಿಕ್ಷಕನ ಬಳಿ ಪಾಠವನ್ನು ಹೇಳಿಸಿಕೊಳ್ಳುತ್ತಿದ್ದಳು. ಈ ವೇಳೆ ಶಿಕ್ಷಕ ನಿನ್ನ ತಮ್ಮನನ್ನು ಮನೆಗೆ ಕಳುಹಿಸು ಎಂದು ಹೇಳಿದ್ದಾನೆ. ನಂತರ ಬಾಲಕಿಯ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿದ್ದಾನೆ.
ಕಾಮತೃಷೆ ತೀರಿಸಿಕೊಂಡ ಬಳಿಕ ಶಿಕ್ಷಕ, ಯಾರಿಗೂ ಈ ವಿಚಾರವಾಗಿ ಕೇಳದಂತೆ ಬೆದರಿಸಿ ಕಳುಹಿಸಿದ್ದಾನೆ. ಬಾಲಕಿ ನಡೆದಿರುವ ಘಟನೆಯನ್ನು ಸಂಪೂರ್ಣವಾಗಿ ಹೆತ್ತವರ ಬಳಿ ಹೇಳಿಕೊಂಡಿದ್ದಾಳೆ. ಸಂತ್ರಸ್ತೆ ತಂದೆ ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಆರೋಪಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ.
ಆರೋಪಿ ಶಿಕ್ಷಕನ ವಿರುದ್ಧ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ತನಿಖೆಯನ್ನು ನಡೆಸುತ್ತಿದ್ದೇವೆ. ಬಾಲಕಿ ವೈದ್ಯಕೀಯ ಮಾಹಿತಿ ಬುರುತ್ತಿದ್ದಂತೆ ಈ ಕುರಿತಾಗಿ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.