‘ಮನೆಯೇ’ ಮಂತ್ರಾಲಯ ಇಂಪ್ಯಾಕ್ಟ್ – ಮಹಿಳೆ ಮನವಿಗೆ ಸ್ಪಂದಿಸಿದ ಶಾಸಕ

Public TV
1 Min Read
smg 8

ಶಿವಮೊಗ್ಗ: ಮನೆಯ ಮಂತ್ರಾಲಯ ಕಾರ್ಯಕ್ರಮದಲ್ಲಿ ಸಮಸ್ಯೆ ಹೇಳಿಕೊಂಡಿದ್ದ ಮಹಿಳೆಗೆ ಶಾಸಕ ಬಿ.ಕೆ.ಸಂಗಮೇಶ್ ಸ್ಪಂದಿಸಿ ದಿನಸಿ ಮತ್ತು ಹಣ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

Public Tv IMPACT copy 2ಲಾಕ್‍ಡೌನ್ ಆರಂಭವಾದ ದಿನದಿಂದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ನಡೆಸಿಕೊಡುತ್ತಿರುವ ಕಾರ್ಯಕ್ರಮ ಮನೆಯೇ ಮಂತ್ರಾಲಯ ರಾಜ್ಯದಲ್ಲಿ ಮನೆ ಮಾತಾಗಿದ್ದು, ರಾಜ್ಯದ ಜನರು ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆ ಹೇಳಿಕೊಳ್ಳುವ ಮೂಲಕ ಪರಿಹಾರ ಸಹ ಕಂಡುಕೊಳ್ಳುತ್ತಿದ್ದಾರೆ.

vlcsnap 2020 05 16 14h28m34s220

ಅದರಂತೆಯೇ ಜಿಲ್ಲೆಯ ಭದ್ರಾವತಿ ಪಟ್ಟಣದ ಜನ್ನಾಪುರ ನಿವಾಸಿ ಶಾಂತಮ್ಮ ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದ ಕಾರಣ ಊಟಕ್ಕೂ ಸಮಸ್ಯೆ ಆಗಿದೆ ಎಂದು ಮನವಿ ಮಾಡಿಕೊಂಡಿದ್ದರು. ಕ್ಷೇತ್ರದ ಮಹಿಳೆಯೊಬ್ಬರು ಊಟದ ಸಮಸ್ಯೆ ಎಂದು ಪಬ್ಲಿಕ್ ಟಿವಿಯಲ್ಲಿ ಮನವಿ ಮಾಡಿಕೊಂಡಿದ್ದನ್ನು ಗಮನಿಸಿದ ಶಾಸಕ ಬಿ.ಕೆ.ಸಂಗಮೇಶ್ ಅವರು ಮಹಿಳೆಗೆ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಹಾಗೂ 1 ಸಾವಿರ ರೂಪಾಯಿ ಹಣವನ್ನು ನೀಡಿ ಸಹಾಯ ಹಸ್ತ ಚಾಚಿದ್ದಾರೆ.

ಅಲ್ಲದೇ ಮುಂದೆಯೂ ಸಹ ಲಾಕ್‍ಡೌನ್ ಮುಂದುವರಿದು ಸಮಸ್ಯೆಯಾದರೆ ತನ್ನನ್ನು ಭೇಟಿಯಾಗಿ ದಿನಸಿ ಕಿಟ್ ಪಡೆದುಕೊಳ್ಳುವಂತೆ ಶಾಸಕರು ತಿಳಿಸಿದ್ದಾರೆ. ಅಲ್ಲದೇ ಕ್ಷೇತ್ರದ ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂದಿರುವ ಶಾಸಕರು ಪಬ್ಲಿಕ್ ಟಿವಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *